ಕನ್ನಡ ಮಾಧ್ಯಮ ಖಾಸಗಿ ಕಾಲೇಜು ಶಾಲೆಗಳಿಗೆ ಅನುದಾನಕ್ಕೆ ಆಗ್ರಹ 
ಜಿಲ್ಲಾ ಸುದ್ದಿ

ಕನ್ನಡ ಮಾಧ್ಯಮ ಖಾಸಗಿ ಕಾಲೇಜು ಶಾಲೆಗಳಿಗೆ ಅನುದಾನಕ್ಕೆ ಆಗ್ರಹ

ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಸಚಿವರೂ ಮನವೊಲಿಸುವ ಪ್ರಯತ್ನ ಮಾಡಿಲ್ಲ ಎಂದು ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಅಧ್ಯಕ್ಷ ನಾಗರಾಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕನ್ನಡ ಮಾಧ್ಯಮ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎಂದು ಕಳೆದ 9 ದಿನಗಳಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಶಿಕ್ಷಣ ಇಲಾಖೆ ಅಥವಾ ಸಚಿವರೂ ಯಾವುದೇ ಮನವೊಲಿಸುವ ಪ್ರಯತ್ನ ಮಾಡಿಲ್ಲ ಎಂದು ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಅಧ್ಯಕ್ಷ ಜಾಲಮಂಗಲ ನಾಗರಾಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1995ರ ನಂತರ ಪ್ರಾರಂಭವಾದ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎಂದು ಧರಣಿ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಬೇಕೆಂಬ ಪ್ರಾಮಾಣಿಕ ಕಾಳಜಿ ಇದ್ದಂತಿಲ್ಲ. ಹೀಗಾಗಿಯೇ ಕಳೆದ 25ವರ್ಷಗಳಿಂದ ಸರ್ಕಾರದ ಯಾವುದೇ ಅನುದಾನವಿಲ್ಲದೇ ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಾ ಬರುತ್ತಿರುವ ನೂರಾರು ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ದೂರಿದರು. ಸರ್ಕಾರಿ ಶಾಲಾ ಕಾಲೆಜುಗಳಲ್ಲಿ ಓದುತ್ತಿರುವ ಮಕ್ಕಳಿಗೆ ಸರ್ಕಾರ ಹಲವು ಸವಲತ್ತುಗಳನ್ನುನೀಡಿದೆ. ಅದೇ ರೀತಿ ಅನು-ದಾನ ರಹಿತ ಶಾಲಾ ಕಾಲೆಜುಗಳಲ್ಲಿ ಓದುತ್ತಿರುವ ಮಕ್ಕಳಿಗೂ ಸೌಲಭ್ಯ ಕಲ್ಪಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

ಒಕ್ಕೂಟದ ರಾಜ್ಯಾಧ್ಯಕ್ಷ ಜಯದೇವಗಾಂಧಿ ಮಾತನಾಡಿ, ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಅನುದಾನಿತ ಶಾಲಾ ಕಾಲೇಜುಗಳಿಗೆ ಆಯಾ ಕಾಲಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ರಾಜ್ಯದಲ್ಲಿ 95ರಿಂದ ಅನುದಾನ ನಿಲ್ಲಿಸಲಾಗಿದ್ದು ಈ ಅವಧಿಯಲ್ಲಿ 48ತಾಲೂಕುಗಳಲ್ಲಿ ಹೊಸದಾಗಿ ಕನ್ನಡ ಶಾಲಾ ಕಾಲೇಜುಗಳನ್ನು ತೆರೆಯಲಾಗಿಲ್ಲ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್