ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕಿಲ್ಲರ್ ಬಿಎಂಟಿಸಿಗೆ ಟೆಕ್ಕಿ ಬಲಿ

ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಪರಿಣಾಮ ಕೆಲಸಕ್ಕೆ ಹೋಗುತ್ತಿದ್ದ ಎಲೆಕ್ಟ್ರಿಕಲ್ ಇಂಜಿನಿಯರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಾಂತಿನಗರ ಬಸ್ ನಿಲ್ದಾಣ...

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಪರಿಣಾಮ ಕೆಲಸಕ್ಕೆ ಹೋಗುತ್ತಿದ್ದ ಎಲೆಕ್ಟ್ರಿಕಲ್ ಇಂಜಿನಿಯರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಾಂತಿನಗರ ಬಸ್ ನಿಲ್ದಾಣ ಬಳಿ ಬುಧವಾರ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಇಂಜಿನಿಯರ್ ಕೇರಳ ಮೂಲದ ಅಜಿತ್(೨೪) ಗುರುತಿಸಲಾಗಿದ್ದು, ಮಹಾಲಕ್ಷ್ಮಿ ಲೇಔಟ್‌ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. 
ಅಜಿತ್ ಅವರು ಇಂದು ಬೆಳಗ್ಗೆ ೮.೨೦ರ ಸುಮಾರಿಗೆ ಬೈಕ್ ನಲ್ಲಿ ಕಚೇರಿಗೆ ತೆರಳುತ್ತಿದ್ದ ವೇಳೆ ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಬರುತ್ತಿದ್ದಾಗ ಡಿಪೋ ಕಡೆಯಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹೆಲ್ಮೆಟ್ ಚಿದ್ರ ಚಿದ್ರ ವಾಗಿ ತಲೆಗೆ ಗಂಭೀರ ಗಾಯಗೊಂಡ ಅಜಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 
ಈ ಸಂಬಂಧ ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಇನ್ಸ್‌ಪೆಕ್ಟರ್ ಮೀನಾಕ್ಷಿ ಅವರು ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ಧಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT