ಬೆಂಗಳೂರು: ಹೈಕೋರ್ಟ್‍ನ ಹಂಗಾಮಿ ಮು.ನ್ಯಾ. ಎಸ್.ಕೆ. ಮುಖರ್ಜಿ ಬುಧವಾರ ಕುಸಿದು ಬಿದ್ದು, ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗಿದ್ದಾರೆ.
ಬುಧವಾರ ಬೆಳಗ್ಗೆ ಎಂಜಿ ರಸ್ತೆಯ ಮಳಿಗೆಯೊಂದಕ್ಕೆ ಭೇಟಿ ನೀಡಿದ್ದ ಅವರು ರಸ್ತೆಯಲ್ಲಿ ಪ್ರಜ್ಞೆತಪ್ಪಿ ಕುಸಿದು ಬಿದ್ದಿದ್ದು, ಮಧ್ಯಾಹ್ನ ಸುಮಾರು ಮೂರು ಗಂಟೆ ಸಮಯಕ್ಕೆ ಆಸ್ಪತ್ರೆಗೆ ಬಂದು ಹಲವು ಪರೀಕ್ಷೆಗಳನ್ನು ಮಾಡಿಸಿಕೊಂಡರು.
ಯಾವುದೇ ರೀತಿಯ ಗಂಭೀರ ಕಾಯಿಲೆಗಳಿಲ್ಲ, ಈಗ ಎಲ್ಲವು ಸರಿಯಾಗಿದೆ ಎಂದು ನ್ಯಾಯಮೂರ್ತಿಗಳನ್ನು ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ. ಬೆಂಗಳೂರಿನ ವಾತಾವರಣದಲ್ಲಿನ ಬದಲಾವಣೆಗಳಿಂದ ನ್ಯಾಯಮೂರ್ತಿಗಳು ಕಳೆದ ಐದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎಂದು ಕಚೇರಿ ಮೂಲಗಳಿಂದ ತಿಳಿದುಬಂದಿದೆ.