ಪ್ರತಿಭಟಿಸಿದರೆ ಪರ್ಯಾಯ ಕ್ರಮ
ರಾಜ್ಯದಲ್ಲಿ 108 ಆ್ಯಂಬುಲೆನ್ಸ್ ಸಿಬ್ಬಂದಿ ಮುಷ್ಕರ ಹೂಡಿದರೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಲು ಸರ್ಕಾರ ಸಿದ್ಧವಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ...
ಮಂಗಳೂರು: ರಾಜ್ಯದಲ್ಲಿ 108 ಆ್ಯಂಬುಲೆನ್ಸ್ ಸಿಬ್ಬಂದಿ ಮುಷ್ಕರ ಹೂಡಿದರೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಲು ಸರ್ಕಾರ ಸಿದ್ಧವಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಹೆಚ್ಚುವರಿ ಸೇವೆಗೆ ವೇತನ ಪಾವತಿಯಾಗದಿರುವುದನ್ನು ವಿರೋಧಿಸಿ, ಆ್ಯಂಬುಲೆನ್ಸ್ ಸಿಬ್ಬಂದಿ ಮುಷ್ಕರ ನಡೆಸುತ್ತಾರೆ ಎಂದು ತಿಳಿದುಬಂದಿದೆ. ಹೆಚ್ಚುವರಿ ಸೇವೆಗೆ ವೇತನ ಪಾವತಿಸುವುದಾಗಿ ಅಸೋಸಿಯೇ ಶನ್ಗೆ ತಿಳಿಸಿದ್ದೇವೆ. ಆದಾಗ್ಯೂ ಮುಷ್ಕರಕ್ಕೆ ಮುಂದಾದರೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.