ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ.ಬಿ.ತಿಮ್ಮೇಗೌಡ ಮತ್ತು ಬಹುಜನ ವಿದ್ಯಾರ್ಥಿ ಸಂಘದ ಸಂಯೋಜಕ ಪ್ರೊ.ಎ. ಹರಿದಾಸ್, ವಕೀಲ ಶ್ರೀಧರ್ ಪ್ರಭು ಇದ್ದರು. 
ಜಿಲ್ಲಾ ಸುದ್ದಿ

ಖಾಸಗಿಯಲ್ಲೂ ಮೀಸಲು ಅಗತ್ಯ

ಒಬಿಸಿ, ಎಸ್‍ಸಿ ಮತ್ತು ಎಸ್‍ಟಿ ವರ್ಗಗಳಿಗೆ ಖಾಸಗಿ ಕ್ಷೇತ್ರದಲ್ಲೂ ಮೀಸಲು ಸೌಲಭ್ಯ ಒದಗಿಸಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪೊ್ರ.ಬಿ.ತಿಮ್ಮೇಗೌಡ ಹೇಳಿದ್ದಾರೆ...

ಬೆಂಗಳೂರು: ಒಬಿಸಿ, ಎಸ್‍ಸಿ ಮತ್ತು ಎಸ್‍ಟಿ ವರ್ಗಗಳಿಗೆ ಖಾಸಗಿ ಕ್ಷೇತ್ರದಲ್ಲೂ ಮೀಸಲು ಸೌಲಭ್ಯ ಒದಗಿಸಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪೊ್ರ.ಬಿ.ತಿಮ್ಮೇಗೌಡ ಹೇಳಿದ್ದಾರೆ.

ಬಹುಜನ ವಿದ್ಯಾರ್ಥಿ ಸಂಘ ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದ ಅವರು, ಒಬಿಸಿ, ಎಸ್‍ಸಿ ಮತ್ತು ಎಸ್‍ಟಿ ವರ್ಗಗಳಿಗೆ ಖಾಸಗಿ ವಲಯದಲ್ಲಿ ಮೀಸಲಾತಿ ನೀಡಿದರೆ ನಿರೀಕ್ಷಿತ ಸಮಾನತೆ ಸಿಗುತ್ತದೆ ಎಂದರು.

ಖಾಸಗಿ ವಲಯದಲ್ಲಿ ಮೀಸಲಾತಿ ಬಗ್ಗೆ ಹಲವು ಚರ್ಚೆಗಳಾಗಿವೆ. ಇದರ ಬಗ್ಗೆ ಬದ್ಧತೆ ಮೂಡಿಸುವ ಕೆಲಸ ಆಗಬೇಕು. ಖಾಸಗಿಯಲ್ಲಿ ಮೀಸಲಾತಿ ನೀಡಿದರೆ ನಷ್ಟ ಉಂಟಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಸ್ಪರ್ಧಾತ್ಮಕ ಕೋರ್ಸ್‍ಗಳಿಗೆ ತರಬೇತಿ ಪಡೆಯುವಂತೆ ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯಲು ಸೂಕ್ತ ತರಬೇತಿ ಪಡೆಯಬೇಕು. ಕೌಶಲ ಅಭಿವೃದ್ಧಿಯಿಂದ ಖಾಸಗಿ ರಂಗದಲ್ಲಿ ಕೆಲಸ ಪಡೆಯಬೇಕು. ಈ ದಿಸೆಯಲ್ಲಿ ಉದ್ಯೋಗಕ್ಕೆ ಪೂರಕವಾದ ಕೋಸ್ರ್ ಗಳನ್ನು ಅಭ್ಯಸಿಸಬೇಕು ಎಂದರು.

ಸರ್ಕಾರಿ ವಲಯದಲ್ಲಿ ಕೆಲಸ ಕಡಿಮೆಯಿದೆ, ಖಾಸಗಿ ಕ್ಷೇತ್ರದಲ್ಲಿ ಕೆಲಸ ಹೆಚ್ಚಿದೆ. ಹೀಗಾಗಿ ವಿದ್ಯಾರ್ಥಿಗಳು ಒಂದೇ ಕೋರ್ಸ್ ಮಾಡುವುದರಿಂದ ಪ್ರಯೋಜನವಿಲ್ಲ. ಅದಕ್ಕೆ ಪರ್ಯಾಯವಾಗಿ ಮತ್ತೊಂದು ಕೋರ್ಸ್‍ನ ಪದವಿ ಪಡೆದರೆ ಅನುಕೂಲವಾಗುತ್ತದೆ. ಇದರಿಂದ ಕೌಶಲ ಅಭಿವೃದ್ಧಿ ಹೆಚ್ಚಾಗುತ್ತದೆ. ಜೊತೆಗೆ ಖಾಸಗಿ ರಂಗದಲ್ಲಿ ಕೆಲಸ ಸಿಗುತ್ತದೆ ಎಂದ ಅವರು, ಅಭಿವೃದ್ಧಿ ಲಾಭವನ್ನು ಎಲ್ಲರಿಗೂ ಸಮನಾಗಿ ಹಂಚಬೇಕು. ಎಸ್‍ಸಿ, ಎಸ್‍ಟಿ ಮತ್ತು ಒಬಿಸಿ ಸಮುದಾಯದವರು ಇತರೆ ವರ್ಗಗಳಿಗಿಂದ ಶ್ರೇಷ್ಠವಾಗಿ ಬೆಳೆಯಬೇಕು. ಇದಕ್ಕೆ ತಕ್ಕಂತೆ ಕೌಶಲ ಅಭಿವೃದ್ಧಿ ಹೆಚ್ಚಿಸಿಕೊಳ್ಳಿ ಎಂದು ಸಲಹೆ ನೀಡಿದರು. ರಾಜ್ಯಗಳಿಗೆ ಹೂಡಿಕೆದಾರರು ಬರುವಂತೆ ಮಾಡಬೇಕು. ಜೊತೆಗೆ ತಮ್ಮಲ್ಲಿರುವ ಪ್ರತಿಭೆಗಳಿಗೆ ಅವಕಾಶ ಕೊಡಿ ಎಂದು ಸರ್ಕಾರದ ಮಟ್ಟದಲ್ಲಿ ಬೇಡಿಕೆ ಇಡಬೇಕು. ಆಗ ಮಾತ್ರ ಸಮಾನ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತ ಪಾರ್ವತೀಶ್ ಮಾತನಾಡಿ, ಪ್ರಸ್ತುತ ಅಂಬೇಡ್ಕರ್ ಉದ್ದೇಶ ಬುಡಮೇಲು ಆಗುತ್ತಿದೆ. ಮೀಸಲು ಇನ್ನೂ ಸಮರ್ಪಕವಾಗಿಲ್ಲ. ಅಂದರ ಅಂಕಿ ಅಂಶಗಳ ಬಗ್ಗೆ ಮಾಹಿತಿ ಪಡೆದು, ಮೀಸಲು ಬಗ್ಗೆ ಪತ್ತೆ ಹಚ್ಚುವಂತ ಕೆಲಸ ಆಗಬೇಕು. ಮೀಸಲಾತಿ ಪತ್ತೆ ಹಚ್ಚಲು ಯೋಜನೆಯೊಂದನ್ನು ರೂಪಿಸಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಕು.ವಿನುತಾ ಖಾಸಗಿ ವಲಯದಲ್ಲಿನ ಮೀಸಲಾತಿ ಬಗ್ಗೆ ಪ್ರಬಂಧ ಮಂಡಿಸಿದರು. ಕಾರ್ಯಕ್ರಮದಲ್ಲಿ ಬಹುಜನ ವಿದ್ಯಾರ್ಥಿ ಸಂಘದ ಸಂಯೋಜಕ ಪ್ರೊ.ಎ.ಹರಿದಾಸ್, ವಕೀಲ ಶ್ರೀಧರ್ ಪ್ರಭು, ಪತ್ರಕರ್ತ ಶಿವಸುಂದರ್, ವಿಜಯï ಕುಮಾರ್ ಮತ್ತಿತರರು ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT