ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಇಂದಿನಿಂದ ಆಪರೇಷನ್ ಸ್ಮೈಲ್

ಕಾಣೆಯಾಗಿರುವ 18 ವರ್ಷದೊಳಗಿನ ಮಕ್ಕಳ ಪತ್ತೆಗೆ ವಿವಿಧ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಪರೇಷನ್ ಸ್ಮೈಲ್' ಕಾರ್ಯಚರಣೆ ಜ.19ರಿಂದ ...

ಬೆಂಗಳೂರು: ಕಾಣೆಯಾಗಿರುವ 18 ವರ್ಷದೊಳಗಿನ ಮಕ್ಕಳ ಪತ್ತೆಗೆ ವಿವಿಧ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪೊಲೀಸ್ ಇಲಾಖೆ ಇಲಾಖೆ ಕೈಗೊಳ್ಳಲಿರುವ `ಆಪರೇಷನ್ ಸ್ಮೈಲ್' ಕಾರ್ಯಚರಣೆ ಜ.19ರಿಂದ ಆರಂಭವಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ವಿಭಾಗದಹೆಚ್ಚುವರಿ ಪೊಲೀಸ್ ಅಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ.

ಸುಪ್ರಿಂಕೋರ್ಟ್ ಆದೇಶದ ಮೇರೆಗೆ ಈ ಕಾರ್ಯಾಚರಣೆ ರೂಪಿಸಲಾಗಿದೆ. ಆಯಾಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಕಾರ್ಮಿಕ ಇಲಾಖೆ, ಮಕ್ಕಳ ಕಲ್ಯಾಣ ಇಲಾಖೆ ಅಬಕಾರಿ ಇಲಾಖೆ ಸೇರಿ ಕೆಲ ಸರ್ಕಾರೇತರ ಸಂಸ್ಥೆಗಳ ಸದಸ್ಯರು `ಆಪರೇಷನ್ ಸ್ಮೈಲ್' ತಂಡದಲ್ಲಿರುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜ.19ರಿಂದ ಫೆ.18ರವರೆಗೆ ಕಾರ್ಯಾಚರಣೆ ನಡೆಯಲಿದೆ. 2011ರಿಂದ ಇದುವರೆಗೆ ಕಾಣೆಯಾಗಿರುವ ಮಕ್ಕಳನ್ನು ತಂಡ ಪತ್ತೆ ಮಾಡಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದಾಖಲಾದ ಪ್ರಕರಣಗಳ ಪೈಕಿ 10 ಕಾಣೆ ಮತ್ತು 15 ಅಪಹರಣ ಪ್ರಕರಣಗಳು ಇದುವರೆಗೂ ಪತ್ತೆಯಾಗಿಲ್ಲ. ಹಾಗಾಗಿ ಕಾರ್ಯಾಚರಣೆಯಲ್ಲಿ ಈ ಪ್ರಕರಣಗಳನ್ನು ಬೆನ್ನತ್ತಲಾಗುವುದೆಂದು ಅವರು ಹೇಳಿದರು.

ನಾನಾ ಕಾರಣಗಳಿಂದಾಗಿ ಮಕ್ಕಳು ಕಾಣೆ ಅಥವಾ ಅಪಹರಣಕ್ಕೆ ಒಳಗಾಗಿದ್ದಾರೆ. ಕೆಲವರು ವೇಶ್ಯಾವಾಟಿಕೆ, ಕೂಲಿ, ಬಿಕ್ಷೆ ಹೀಗೆ ನಾನಾ ರೀತಿಯ ಕೆಲಸಗಳಿಗೆ ಮಕ್ಕಳನ್ನು ಬಳಸಿಕೊಳ್ಳುವವರ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ವೇಳೆ ಇಂಥ ಕೃತ್ಯಗಳಲ್ಲಿ ಭಾಗಿಯಾಗಿರುವವರ ಬಗ್ಗೆ ನಿಗಾ ವಹಿಸಲು ಸೂಚಿಸಲಾಗಿದೆ. ಮಕ್ಕಳ ಪತ್ತೆಗೆ ಆಯಾ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಪತ್ತೆಯಾದ ಮಕ್ಕಳಿಗೆ ಪುನರ್ವಸತಿ ಕಲ್ಪಿಸಲಾಗುವುದೆಂದು ಎಂ.ನಾರಾಯಣ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT