ಬೆಂಗಳೂರು: ಫೆಬ್ರವರಿ 3 ರಿಂದ 5ರವರೆಗೆ ಅರಮನೆ ಮೈದಾನದಲ್ಲಿ ನಡೆಯುವ ಕರ್ನಾಟಕ ಇನ್ವೆಸ್ಟ್-2016ರಲ್ಲಿ ಬಂಡವಾಳ ಹೂಡಿಕೆದಾರರಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಮೂಲ ಸೌಕರ್ಯ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿವಿಧ ಇಲಾಖೆಗಳಿಂದ ಹಮ್ಮಿಕೊಳ್ಳಬಹುದಾದ ಅಭಿವೃದ್ಧಿಕಾರ್ಯಕ್ರಮಗಳ ಬಗ್ಗೆ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಹೂಡಿಕೆ ಸಮಾವೇಶದಲ್ಲಿ ಭಾಗವಹಿಸುವ ಉದ್ದಿಮೆ ದಾರರಿಗೆ ಅನು ಕೂಲವಾಗುವಂತೆ ಎಲ್ಲಾ ಮಾಹಿತಿ ಒದಗಿಸಿ ಬಿಡ್ ಮಾಡಲಾಗುತ್ತದೆ. ತಮಗೆ ನಿಲುಕುವ ಮೊತ್ತಕ್ಕೆ ಬಿಡ್ ಕೂಗಿದರೆ ಒಡಂಬಡಿಕೆ ಮಾಡಿಕೊಂಡು ಕೆಲಸ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಕೃಷಿ, ಇಂಧನ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಅನೇಕ ಇಲಾ ಖೆಗಳಿಗೆ ಸಂಬಂಧಿಸಿದ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ತುಮಕೂರಿಲ್ಲಿ ರು.158 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಬಸ್ ನಿಲ್ದಾಣ ನಿರ್ಮಾಣದ ಜವಾಬ್ದಾರಿಯನ್ನು ಬಂಡವಾಳ ಹೂಡಿ ಕೆದಾರರಿಗೆ ನೀಡಲಿದ್ದು ಯೋಜನೆ ಶೀರ್ಘ ಮುಗಿಯಲಿದೆ ಎಂದರು