8ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಿದ್ಧತೆಗಳನ್ನು ತಿಳಿಸುವ ನಿಟ್ಟಿನಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ರೋಷನ್ ಬೇಗ್, ಅಕ 
ಜಿಲ್ಲಾ ಸುದ್ದಿ

ಚಿತ್ರೋತ್ಸವ ಉದ್ಘಾಟನೆಗೆ ಬರ್ತಾರೆ ಜಯಾ ಬಚ್ಚನ್

ಏಕಕಾಲಕ್ಕೆ ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯಲಿರುವ 8ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಹಿರಿಯ ನಟಿ ಜಯಾ ಬಚ್ಚನ್...

ಬೆಂಗಳೂರು: ಏಕಕಾಲಕ್ಕೆ ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯಲಿರುವ 8ನೇ      ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಹಿರಿಯ ನಟಿ ಜಯಾ ಬಚ್ಚನ್   ಚಾಲನೆ ನೀಡಲಿದ್ದಾರೆ. ಜ.28ರಂದು ಸಂಜೆ 5.30ಕ್ಕೆ ವಿಧಾನಸೌಧದ ಎದುರು ಅದ್ದೂರಿ      ಉದ್ಘಾಟನಾ  ಕಾರ್ಯಕ್ರಮ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ  ಹೇಳಿದರು.

ಸೋಮವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ  ಬಗ್ಗೆ ಮಾಹಿತಿ ನೀಡಿದ ಸಿಎಂ, ಈ ಬಾರಿ ಚಿತ್ರೋತ್ಸವ ಹಲವು  ವಿಶೇಷತೆಗಳಿಂದ ಕೂಡಿದೆ.  ಎಂಟು ದಿನಗಳ ಕಾಲ ನಡೆಯಲಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ 50 ದೇಶಗಳ  172 ಸಿನೆಮಾಗಳು ಪ್ರದರ್ಶನಗೊಳ್ಳಲಿವೆ. ಆಯಾ ದೇಶದ ಭಾಷೆ, ಸಂಸ್ಕೃತಿಯನ್ನು  ಪ್ರತಿಬಿಂಬಿಸುವ ಈ ಚಿತ್ರೋತ್ಸವದಲ್ಲಿ ಕನ್ನಡದ 15 ಸಿನೆಮಾಗಳು  ಪ್ರದರ್ಶನ ಕಾಣಲಿದ್ದು,  ಏಷ್ಯನ್, ಭಾರತೀಯ ಹಾಗೂ ಕನ್ನಡ ಸೇರಿ ಮೂರು ವಿಭಾಗಳಲ್ಲಿ ಸಿನೆಮಾಗಳು ಸ್ಪರ್ಧಿಸಲಿವೆ. ಗೆದ್ದ ಸಿನೆಮಾಗಳಿಗೆ ನೀಡಲಿರುವ ಬಹುಮಾನದ ಮೊತ್ತವನ್ನು ಈ ವರ್ಷದಿಂದ  11ರಿಂದ 17 ಲಕ್ಷಕ್ಕೆ ಏರಿಸಲಾಗಿದೆ. ಮೈಸೂರು ಹಾಗೂ ಬೆಂಗಳೂರಿನಲ್ಲಿ ನಡೆಯಲಿರುವ   ಚಿತ್ರೋತ್ಸವವನ್ನು ಪ್ರತಿ ದಿನ 12 ಸಾವಿರ ಮಂದಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. 
ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪ್ರಸಾದ್ ಚಿತ್ರೋತ್ಸವವನ್ನು ಉದ್ಘಾಟಿಸುವರು ಎಂದರು.

ಪ್ರಸಿದ್ಧ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರು ಚಿತ್ರೋತ್ಸವದ ಸ್ಮರಣ ಸಂಚಿಕೆ  ಬಿಡುಗಡೆ  ಮಾಡಲಿದ್ದು, ಖ್ಯಾತ ನಿರ್ದೇಶಕ ಗುಲ್ಜಾರ್, ಹಾಲಿವುಡ್ ಚಿತ್ರ ನಿರ್ಮಾಪಕ ಅಶೋಕ್  ಮೃತ್‍ರಾಜ್, ಪ್ರಸಿದ್ಧ ನಟಿ ಅಪರ್ಣಾ ಸೇನ್ ಅವರೊಂದಿಗೆ ಕನ್ನಡದ ಸುದೀಪ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.  ಖ್ಯಾತ ನೃತ್ಯಗಾರ್ತಿ ಶೋಭನಾ ಹಾಗೂ ನಿರುಪಮಾ ರಾಜೇಂದ್ರ ಅವರಿಂದ 30 ನಿಮಿಷಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮೈಸೂರಿನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಎಲ್ಲರು ಭಾಗವಹಿಸುವ ನಿಟ್ಟಿನಲ್ಲಿ ಒಂದು ದಿನ ಚಿತ್ರೋದ್ಯಮಕ್ಕೆ ರಜೆ ಘೋಷಿಸಲಾಗಿದೆ. ಇದನ್ನು ಒಂದು ಮರೆಯಲಾಗದ ಸಾಂಸ್ಕೃತಿಕ ಕಾರ್ಯಕ್ರಮವಾಗಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ  ಎಂದು  ಮುಖ್ಯಮಂತ್ರಿ ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ