ಬೆಂಗಳೂರು: ಎಂಜಿನ್‍ನಲ್ಲಿ ಉಂಟಾದ ಶಾರ್ಟ್ ಸಕ್ರ್ಯೂಟ್‍ನಿಂದ ಬಿಎಂಟಿಸಿ ಬಸ್‍ಗೆ ಬೆಂಕಿ ತಗುಲಿದ ಘಟನೆ ಮಂಗಳವಾರ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ.
ಬಿಎಂಟಿಸಿ ಬಸ್ ನಿಲ್ದಾಣದ ಪ್ಲಾಟ್ ಫಾರಂ 25ರಲ್ಲಿ ನಿಂತಿದ್ದ ಚಂದ್ರಲೇಔಟ್ ಮಾರ್ಗದ ಬಸ್‍ನ ಎಂಜಿನ್‍ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಜಾಗೃತರಾದ ಬಸ್ ಚಾಲಕ ಹಾಗೂ ನಿರ್ವಾಹಕ ಪ್ರಯಾಣಿಕರನ್ನು ಬಸ್‍ನಿಂದ ಇಳಿಸಿ, ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಬಿಎಂಟಿಸಿ ಅಧಿಕಾರಿಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಆಗಿಲ್ಲ. ಇದೇ
ವೇಳೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.