ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ರೋಹಿತ್ 
ಜಿಲ್ಲಾ ಸುದ್ದಿ

ಸಾವಿಗೆ ಕೇಂದ್ರವೇ ಹೊಣೆ

ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾ ಸಾವಿಗೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಎಐಡಿಎಸ್‍ಒ ರಾಜ್ಯಾಧ್ಯಕ್ಷ ಎನ್. ರಾಜಶೇಖರ್ ಆರೋಪಿಸಿದರು...

ಬೆಂಗಳೂರು: ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾ ಸಾವಿಗೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಎಐಡಿಎಸ್‍ಒ ರಾಜ್ಯಾಧ್ಯಕ್ಷ ಎನ್. ರಾಜಶೇಖರ್ ಆರೋಪಿಸಿದರು.

ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಎಐಡಿಎಸ್‍ಒ ಹಾಗೂ ಎಐಡಿವೈಒ ಸಂಘಟನೆಗಳು ಜಂಟಿಯಾಗಿ ಆಯೋಜಿಸಿದ್ದ ಪ್ರತಿಭಟನೆ ವೇಳೆ ಮಾತನಾಡಿ, ರೋಹಿತ್ ಸಾವು ಆಶ್ಚರ್ಯಕರ ಮತ್ತು ಅಷ್ಟೇ ಘೋರ. ಕೇಂದ್ರ ಸರ್ಕಾರವು ದೇಶಾದ್ಯಂತ ಆರ್‍ಎಸ್‍ಎಸ್, ಸಂಘ ಪರಿವಾರದ ಅಮಾನುಷ ಕ್ರಿಯೆಗಳನ್ನು ಪೊ್ರೀತ್ಸಾಹಿಸುತಿರುವುದಕ್ಕೆ ಇದು ನಿದರ್ಶನವಾಗಿದೆ. ಈ ಸಾವಿಗೆ ಬಿಜೆಪಿ ಆರ್‍ಎಸ್‍ಎಸ್ ಸಂಘ ಪರಿವಾರದವರೇ ನೇರ ಹೊಣೆ. ಇದು ಪ್ರಜಾತಂತ್ರದ ಕೊಲೆಯಾಗಿದೆ ಎಂದು ಹೇಳಿದರು.

ಯಾವುದೇ ವ್ಯಕ್ತಿಯುಕೋಮುವಾದಿ ರಾಜಕೀಯದ ವಿರುದ್ಧ ದಿಟ್ಟತನದಿಂದ ಧ್ವನಿ ಎತ್ತಿದರೆ, ಆತನಿಗೆ  ದೇಶದ್ರೋಹಿ, ಭಯೋತ್ಪಾದಕ ಎಂಬ ಹಣೆಪಟ್ಟಿ ಹಚ್ಚಿ, ಕಿರುಕುಳ
ನೀಡಲಾಗುತ್ತಿದೆ. ರೋಹಿತ್ ಆತ್ಮಕ್ಕೆ ಶಾಂತಿ ಸಿಗಲೆಂದು ಸಂತಾಪ ಸೂಚಿಸುವ ಜತೆಗೆ ಇಡೀ ದೇಶ ಬಿಜೆಪಿ-ಆರ್‍ಎಸ್ ಎಸ್‍ನ ಕ್ರೂರ ಕೋಮುವಾದಿ ಫ್ಯಾಸಿಸ್ಟ್ ಅಟ್ಟಹಾಸವನ್ನು
ಹಿಮ್ಮೆಟ್ಟಿಸುವುದಕ್ಕೆ ಸಜ್ಜಾಗುತ್ತಿದೆ. ಈ ಹಿನ್ನೆಲೆಯಲ್ಲಿ ರೋಹಿತ್ ವೆಮುಲಾನ ಸಾವಿಗೆ ಕಾರಣರಾದ ಹೈದರಾಬಾದ್ ವಿಶ್ವದ್ಯಾಲಯದ ಕುಲಪತಿ, ಕೇಂದ್ರಸಚಿವರು ಈ ಕೂಡಲೇ ರಾಜಿನಾಮೆ ನೀಡಬೇಕು. ವಿದ್ಯಾರ್ಥಿಯ ಮನೆಯವರಿಗೆ ಪರಿಹಾರ ಹಾಗೂ ಆತನಿಗೆ ಸಂದಬೇಕಾಗಿರುವ ವಿದ್ಯಾರ್ಥಿ ವೇತನವನ್ನು ವಿತರಿಸಬೇಕು ಎಂದು ಆಗ್ರಹಿಸಿದರು.

ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಜಯಣ್ಣ ಮಾತನಾಡಿ, ಈ ಘಟನೆಯಲ್ಲಿ ಸರ್ಕಾರ ಹಾಗೂ ವಿಶ್ವವಿದ್ಯಾಲಯ ಹೊಂದಿರುವ ಪ್ರತೀಕಾರದ ಮನೋಭಾವ ಸ್ಪಷ್ಟವಾಗಿ ಕಾಣುತ್ತಿದೆ. ಇದರಿಂದ
ವಿಶ್ವವಿದ್ಯಾಲಯದ ಸ್ವಾಯತ್ತತೆಗೆ ಧಕ್ಕೆ ಬರಲಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಎಐಡಿಎಸ್‍ಒ ಜಿಲ್ಲಾ ಉಪಾಧ್ಯಕ್ಷ ಅಜಯ್ ಕಾಮತ್ ಮತ್ತು ಹಲವಾರು ಕಾರ್ಯಕರ್ತರು
ಪಾಲ್ಗೊಂಡಿದ್ದರು.

ಬಂಧನಕ್ಕೆ ಆಗ್ರಹ: ವಿದ್ಯಾರ್ಥಿ ರೋಹಿತ್ ಆತ್ಮಹತ್ಯೆಗೆ ಕಾರಣರಾದ ಹೈದರಾಬಾದ್ ವಿವಿ ಕುಲಪತಿಯನ್ನು ಕೂಡಲೇ ಬಂಧಿಸಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಎಂ. ವೆಂಕಟಸ್ವಾಮಿ ಆಗ್ರಹಿಸಿದ್ದಾರೆ.

ಹೋರಾಟ ನಿರತ ವಿದ್ಯಾರ್ಥಿ ವೇಮುಲ ರೋಹಿತ್ ಅವರನ್ನು ಎಬಿವಿಪಿ ಒತ್ತಡಕ್ಕೆ ಮಣಿದು ಕುಲಪತಿಯವರು ಹಾಸ್ಟೆಲ್‍ನಿಂದ ಹೊರಹಾಕಿ ದ್ದರಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಕುಲಪತಿಯವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel