ಕರ್ನಾಟಕ ರಾಜ್ಯ ಉಸ್ತುವಾರಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ 
ಜಿಲ್ಲಾ ಸುದ್ದಿ

ಕಾಂಗ್ರೆಸ್ ನ 3 ಅಭ್ಯರ್ಥಿಗಳ ಹೆಸರು ಬಹುತೇಕ ಅಂತಿಮ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಗೆ ಹಲವು ಜಂಜಾಟಗಳ ನಡೆವೆಯೂ ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳ ಹೆಸರು...

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಗೆ ಹಲವು ಜಂಜಾಟಗಳ ನಡೆವೆಯೂ ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳ ಹೆಸರು ಬಹುತೇಕ ಅಂತಿಮವಾಗಿದ್ದು, ಶುಕ್ರವಾರದಂದು(ನಾಳೆ)ಪ್ರಕಟವಾಗುವ ಸಾಧ್ಯತೆ ಇದೆ.

ಬೀದರ್ ಗ್ರಾಮಾಂತರ ಕ್ಷೇತ್ರದಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತಗೊಂಡಿದ್ದ ರಹೀಂ ಖಾನ್ ಹಾಗೂ ದೇವದುರ್ಗ ಕ್ಷೇತ್ರದಿಂದ ಮಾಜಿ ಶಾಸಕ ಬಿ.ವೆಂಕಟೇಶ್ ನಾಯಕ್ ಅವರ ಪತ್ನಿ ಸಾವಿತ್ರಮ್ಮ ವೆಂಕಟೇಶ್ ನಾಯಕ್ ಹೆಸರು ಯಾವುದೇ ಗೊಂದಲ ಇಲ್ಲದೆ ಅಂತಿಮವಾಗಿದೆ. ಇನ್ನು ಸಾಕಷ್ಟು ಗೊಂದಲ ಸೃಷ್ಟಿಸಿದ ಬೆಂಗಳೂರು ನಗರದ ಹೆಬ್ಬಾಳ ಕ್ಷೇತ್ರದಲ್ಲಿ ಅಳೆದು ತೂಗಿ ಭೈರತಿ ಸುರೇಶ್ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ನಿಚ್ಚಳವಾಗಿದೆ. ಕೆಪಿಸಿಸಿ ಉನ್ನತ ಮಟ್ಟದಲ್ಲಿ ಈ ಮೂವರ ಹೆಸರು ಬಹುತೇಕ ಅಂತಿಮವಾಗಿದೆ. ಆದರೆ ಗುರುವಾರ ರಾತ್ರಿ ರಾಜ್ಯಕ್ಕೆ ಆಗಮಿಸುವ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಪರಿಶೀಲಿಸಿದ ನಂತರ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ.

ಇಂದು ಡಿಗ್ಗಿ ರಾಜ್ಯಕ್ಕೆ: ಇನ್ನೊಂದೆಡೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಜಿಲ್ಲಾ ಪಂಚಾಯತ್, ತಾಲ್ಲೂಕ್ ಪಂಚಾಯತ್ ಚುನಾವಣಾ ಪ್ರಣಾಳಿಕೆ ತಯಾರಿಸಿ ಸಮಿತಿ ರಚಿಸಿದ್ದೇವೆ. ತಾಲ್ಲೂಕು ಪಂಚಾಯತ್ ಗಳಿಗೆ ಹೆಚ್ಚಿನ ಬಲ ತುಂಬಲು ಚಿಂತನೆ ನಡೆಸಲಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಇಂದು ರಾಜ್ಯಕ್ಕೆ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಆಗಮಿಸಲಿದ್ದು, ಅವರೊಂದಿಗೆ ಚರ್ಚಿಸಿ ಪಟ್ಟಿ ಅಂತಿಮ ಮಾಡುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ