ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬೇಡಿಕೆ ಈಡೇರಿಸಿ ಇಲ್ಲವೇ ಮುಷ್ಕರ ಎದುರಿಸಿ: ಆರೋಗ್ಯ ಕವಚ ನೌಕರರ ಎಚ್ಚರಿಕೆ

ಕರ್ನಾಟಕ ರಾಜ್ಯ ಆರೋಗ್ಯ ಕವಚ(108) ನೌಕರರ ಹೆಚ್ಚುವರಿ ವೇತನಕ್ಕಾಗಿ ಸರ್ಕಾರ 6 ಕೋಟಿ ಬಿಡುಗಡೆ ಮಾಡಿದೆ. ಆದರೆ ಇನ್ನೂ ಈ ಕುರಿತು ಆದೇಶ...

ಬೆಂಗಳೂರು: ಕರ್ನಾಟಕ ರಾಜ್ಯ ಆರೋಗ್ಯ ಕವಚ(108) ನೌಕರರ ಹೆಚ್ಚುವರಿ ವೇತನಕ್ಕಾಗಿ ಸರ್ಕಾರ 6 ಕೋಟಿ ಬಿಡುಗಡೆ ಮಾಡಿದೆ. ಆದರೆ ಇನ್ನೂ ಈ ಕುರಿತು ಆದೇಶ ಪತ್ರಗಳು ನೌಕರರ ಕೈ ಸೇರಿಲ್ಲ. ಜನವರಿ 24ರೊಳಗೆ ಜಿವಿಕೆ ಸಂಸ್ಥೆ ನೌಕರರಿಗೆ ಹೆಚ್ಚುವರಿ ವೇತನ ನೀಡುವ ಆದೇಶ ಪತ್ರಗಳನ್ನು ನೀಡದಿದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು 108 ಆಂಬುಲೆನ್ಸ್ ನೌಕರರ ಸಂಘ ಗೌರವಾಧ್ಯಕ್ಷ ಗೂಳಿಹಟ್ಟಿ ಶೇಖರ್ ತಿಳಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಆರೋಗ್ಯ ಕವಚ(108) ನೌಕರರು ಹೆಚ್ಚುವರಿಯಾಗಿ 4 ಗಂಟೆ ಕೆಲಸ ಮಾಡುತ್ತಿದ್ದು, ಹೆಚ್ಚುವರಿ ಸಮಯಕ್ಕೆ ವೇತನ ನೀಡುವಂತೆ ಹಲವಾರು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ.

ನೌಕರರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಸಚಿವ ಯು.ಟಿ.ಖಾದರ್, ಇತ್ತೀಚೆಗೆ ಹೆಚ್ಚುವರಿ ವೇತನ ನೀಡಲು 6 ಕೋಟಿ ರೂಪಾಯಿಗೂ ಹೆಚ್ಚಿನ ಹಣ ಬಿಡುಗಡೆ ಮಾಡಿರುವುದು ಸ್ವಾಗತಾರ್ಹ. ಆದರೆ, ಎಷ್ಟು ಪ್ರಮಾಣದ ಹೆಚ್ಚುವರಿ ವೇತನ ನೀಡುತ್ತಾರೆ ಎಂಬ ಬಗ್ಗೆ ಖಚಿತವಾದ ಮಾಹಿತಿಯಿಲ್ಲ. ಆದೇಶ ಪತ್ರಗಳ ಕುರಿತು ಜಿವಿಕೆ ಸಂಸ್ಥೆಯನ್ನು ಕೇಳಿದರೆ ಯಾವುದೇ ಉತ್ತರ ನೀಡಿಲ್ಲ. ಈ ಕಾರಣದಿಂದ ಜನವರಿ 24ರೊಳಗೆ ಆದೇಶ ಪತ್ರವನ್ನು ನೀಡದಿದ್ದಲ್ಲಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದರು.

108 ನಿಲ್ಲುವುದಿಲ್ಲ: ಆದೇಶ ಪ್ರತಿಗಳನ್ನು ನೀಡದಿದ್ದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆರೋಗ್ಯ ಕವಚ(108) ನೌಕರರು ಜನವರಿ 24ರಿಂದ ಮುಷ್ಕರ ನಡೆಸಲಿದ್ದಾರೆ.
ಆದರೆ ಈ ಮುಷ್ಕರದಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಯಾವುದೇ ಕಾರಣಕ್ಕೂ 108 ವಾಹನಗಳನ್ನು ನಿಲ್ಲಿಸುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video