ಬೆಂಗಳೂರಿನಲ್ಲಿ ಬುಧವಾರ ಸಾಮಾಜಿಕ ಪರಿವರ್ತನಾ ಜನಾಂದೋಲನ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ತಮಟೆ ಬಾರಿಸುವ ಮೂಲಕ ಚಾಲನೆ 
ಜಿಲ್ಲಾ ಸುದ್ದಿ

ಅಪೌಷ್ಟಿಕತೆ ನಿವಾರಣೆಗೆ ಮಕ್ಕಳಿಗೆ ದಿನಕ್ಕೊಂದು ಮೊಟ್ಟೆ ನೀಡಲು ಶಿಫಾರಸು

ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡುವ ಉದ್ದೇಶದಿಂದ ಮಕ್ಕಳಿಗೆ ಮೊಟ್ಟೆ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ರಾಜ್ಯ ಮಕ್ಕಳ...

ಬೆಂಗಳೂರು: ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡುವ ಉದ್ದೇಶದಿಂದ ಮಕ್ಕಳಿಗೆ ಮೊಟ್ಟೆ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ತಿಳಿಸಿದ್ದಾರೆ.

ಸಾಮಾಜಿಕ ಪರಿವರ್ತನಾ ಜನಾಂದೋಲನ ಸಂಘಟನೆ ಗುರುವಾರ ಶಾಸಕರ ಭವನದಲ್ಲಿ ಆಯೋಜಿಸಿದ್ದ ಅಂಗನವಾಡಿ ಮತ್ತು ಶಾಲಾ ಮಕ್ಕಳಿಗೆ ಮೊಟ್ಟೆ ವಿಷಯದ ಕುರಿತು ಚಿಂತನಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮೊಟ್ಟೆ ಸೇವನೆ ಮಕ್ಕಳ ಮೆದುಳು ಮತ್ತು ದೈಹಿಕ ಸಾಮರ್ಥ್ಯ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದರಿಂದ ಅಪೌಷ್ಠಿಕತೆಯ ಪ್ರಮಾಣ ಕಡಿಮೆಯಾಗುತ್ತದೆ. ಹೀಗಾಗಿ ಮಕ್ಕಳಿಗೆ ಮೊಟ್ಟೆ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದರು.

ರಾಜ್ಯದ ಹಲವಾರು ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶೇ 80ರಷ್ಟು ಕಡೆ ಮಕ್ಕಳಿಗೆ ಉತ್ತಮ ಆಹಾರ ದೊರೆಯುತ್ತಿದೆ. ಉಳಿದ ಕಡೆ ಮೇಲ್ವಿಚಾರಣೆ ಮಾಡುವವರ ಕೊರತೆ ಇರುವುದರಿಂದ ಮಕ್ಕಳಿಗೆ ಸರಿಯಾದ ಪೌಷ್ಠಿಕಾಂಶಯುತ ಆಹಾರ ದೊರೆಯುತ್ತಿಲ್ಲ. ಪೋಷಕರು ಮಕ್ಕಳಿಗೆ ಕುರುಕಲು ಪದಾರ್ಥಗಳನ್ನು ನೀಡುವುದು ಮಕ್ಕಳಲ್ಲಿನ ಅಪೌಷ್ಠಿಕತೆಗೆ ಕಾರಣವಾಗುವುದರಿಂದ ಅಂತಹ ಆಹಾರ ಅವರಿಗೆ ನೀಡಬಾರದು. ಈ ಕಾರಣದಿಂದಲೇ ಕೇಂದ್ರೀಯ ವಿದ್ಯಾಲಯಗಳಲ್ಲಿ ಮಕ್ಕಳ ಊಟದ ಡಬ್ಬಿಗಳನ್ನು ಶಿಕ್ಷಕರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಆಹಾರ ತಜ್ಞ ಡಾ.ಕೆ.ಸಿ.ರಘು ಮಾತನಾಡಿ, ಆಹಾರದ ವಿಷಯದಲ್ಲಿ ಸರ್ಕಾರಗಳು ಸಾಂಸ್ಕೃತಿಕ ಚೌಕಟ್ಟನ್ನು ಹಾಕಿಕೊಳ್ಳಬಾರದು. ದೇಶದಲ್ಲಿ ಶೇ 48ರಷ್ಟು ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ಭಾರತದ ಮಕ್ಕಳಲ್ಲಿ ಹೆಚ್ಚಿನವರು ಪ್ರೋಟೀನ್ ಹಾಗೂ ಕೊಬ್ಬಿನಾಂಶದ ಕೊರತೆಯಿಂದ ಬಳಲುತ್ತಿದ್ದಾರೆ. ಮೊಟ್ಟೆಯಲ್ಲಿ ಹೆಚ್ಚಿನ ಶೇ 13ರಷ್ಟು ಪ್ರೋಟಿನ್ ಹಾಗೂ ಶೇ 10ರಷ್ಟು ಕೊಬ್ಬಿನಾಂಶವಿದ್ದು, ಮಕ್ಕಳ ಬೆಳವಣಿಗೆಗೆ ಪೂರಕವಾಗಿದೆ.ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರದಲ್ಲಿ ಆಹಾರ ರಾಜಕಾರಣ ನಡೆಯುತ್ತಿದ್ದು, ಆಹಾರದ ವಿಷಯದಲ್ಲಿ ಜಾತಿ, ಧರ್ಮ ತರುವುದು ಸರಿಯಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!