(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಪತ್ನಿ ಕೊಲೆಗೆ ಯತ್ನ: ಶರಣಾದ ಆರೋಪಿ

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆಗೈದಿರುವ ವ್ಯಕ್ತಿ, ಪೊಲೀಸರಿಗೆ ಶರಣಾಗಿರುವ ಘಟನೆ ಮಂಗಳವಾರ ಗರುಡಾಚಾರ್ ಪಾಳ್ಯದ ಲಕ್ಷ್ಮಿಸಾಗರದಲ್ಲಿ ನಡೆದಿದೆ...

ಬೆಂಗಳೂರು; ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆಗೈದಿರುವ ವ್ಯಕ್ತಿ, ಪೊಲೀಸರಿಗೆ ಶರಣಾಗಿರುವ ಘಟನೆ ಮಂಗಳವಾರ ಗರುಡಾಚಾರ್ ಪಾಳ್ಯದ ಲಕ್ಷ್ಮಿಸಾಗರದಲ್ಲಿ ನಡೆದಿದೆ.

ಘಟನೆಯಲ್ಲಿ ಇರಿತಕ್ಕೆ ಒಳಗಾಗಿರುವ ಅಮರಾವತಿ (34) ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈಕೆಯ ಪತಿ ನಾಗರಾಜ್ ಪೊಲೀಸರ ವಶದಲ್ಲಿದ್ದಾನೆ. ಶ್ರೀನಿವಾಸಪುರ ಮೂಲದ ನಾಗರಾಜ್ ಸರ್ಜಾಪುರದಲ್ಲಿ ಸೈಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ. 17 ವರ್ಷದ ಹಿಂದೆ ಅಮರಾವತಿ ಅವರನ್ನು ವಿವಾಹವಾಗಿದ್ದ.

ದಂಪತಿಗೆ ಇಬ್ಬರು ಮಕ್ಕಳಿದ್ದು, ಕಳೆದ 8 ವರ್ಷಗಳಿಂದ ಲಕ್ಷ್ಮೀ ಸಾಗರದಲ್ಲಿ ನೆಲೆಸಿದ್ದರು. ಎದುರು ಮನೆ ವ್ಯಕ್ತಿಯೊಂದಿಗೆ ಅಮರಾವತಿ ಅಕ್ರಮ ಸಂಬಂಧ ಹೊಂದಿದ್ದಳು. ಈ ಬಗ್ಗೆ ಅನೇಕ ಬಾರಿ ನಾಗರಾಜ್ ಬುದ್ಧಿ ಹೇಳಿ, ಎಚ್ಚರಿಕೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರವೂ ಅಮರಾವತಿ ಅಕ್ರಮ ಸಂಬಂಧ ಮುಂದುವರಿಸಿದ್ದಳು. ಎಷ್ಟೇ ಹೇಳಿದರೂ ತನ್ನ ಮಾತಿಗೆ ಗೌರವ ನೀಡಿದ್ದರಿಂದ ಕೋಪಗೊಂಡ ನಾಗರಾಜ್ ಮಧ್ಯಾಹ್ನ 1ರ ಸುಮಾರಿಗೆ ಅಮರಾವತಿಯ ಕುತ್ತಿಗೆ ಬಲವಾಗಿ ಇರಿದು ಹೊರ ನಡೆದಿದ್ದಾನೆ. ಬಳಿಕ ಈಕೆಯ ಚೀರಾಟ ಕೇಳಿದ ನೆರೆಹೊರೆಯವರು ಮನೆಗೆ ಬಂದು ನೋಡುವ ವೇಳೆಗೆ ಅಮರಾವತಿ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದಳು. ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು.

ನೇರ ಠಾಣೆಗೆ
ಪತ್ನಿಗೆ ಚಾಕುವಿನಿಂದ ಇರಿದ ಬಳಿಕ ನಾಗರಾಜ್, ನೇರ ಮಹದೇವಪುರ ಪೊಲೀಸ್ ಠಾಣೆಗೆ ತೆರಳಿದ್ದಾನೆ. ಪತ್ನಿಯನ್ನು ಕೊಲೆಗೈದಿರುವುದಾಗಿ ಹೇಳಿ ಶರಣಾಗಿದ್ದಾನೆ. ಮೂರು ವರ್ಷಗಳಿಂದ ಅಮರಾವತಿ ಅನೈತಿಕ ಸಂಬಂಧ ಹೊಂದಿದ್ದಳು. ಎಷ್ಟೇ ಬುದ್ಧಿವಾದ ಹೇಳಿದರೂ ಕೇಳದೆ ಚಾಳಿ ಮುಂದುವರಿಸಿದ್ದಳು. ಹಾಗಾಗಿ ಆಕೆಯನ್ನು ಕೊಲೆ ಮಾಡಲು ಇರಿದೆ ಎಂದು ಒಪ್ಪಿಕೊಂಡಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ