ಡಿ.ಕೆ ಶಿವಕುಮಾರ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಟಿಕೆಟ್ ತ್ಯಾಗ ಮಾಡಿದವರಿಗೆ ಕಾಂಗ್ರೆಸ್ ನಿಂದ ನಿಗಮ ಮಂಡಳಿ ಆಫರ್

ಪಂಚಾಯಿತಿ ಚುನಾವಣೆಯಲ್ಲಿ ಟಿಕೆಟ್ ತ್ಯಾಗ ಮಾಡಿದವರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡುತ್ತೇನೆ. ಇದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಆಫರ್

ಚನ್ನಪಟ್ಟಣ: ಪಂಚಾಯಿತಿ ಚುನಾವಣೆಯಲ್ಲಿ ಟಿಕೆಟ್ ತ್ಯಾಗ  ಮಾಡಿದವರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡುತ್ತೇನೆ. ಇದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿರುವ ಆಫರ್.

ಇಲ್ಲಿನ ಹೊಂಗನೂರು ಗ್ರಾಮದ ಅರಸು ಸಮುದಾಯಭವನದಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ನಿಂದ ಆಕಾಂಕ್ಷಿಗಳ ಸಂಖ್ಯೆ ಸಹಜವಾಗಿಯೇ ಹೆಚ್ಚಾಗಿದೆ. ಆದರೆ ಒಂದು ಕ್ಷೇತ್ರದಿಂದ ಒಬ್ಬರಿಗೆ ಮಾತ್ರ ಅವಕಾಶ ನೀಡಲು ಸಾಧ್ಯ. ಅವಕಾಶ ವಂಚಿತರು ಯಾವುದೇ ಗೊಂದಲ ಉಂಟುಮಾಡದೇ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ. ಗೆಲ್ಲುವ ಅಭ್ಯರ್ಥಿಯನ್ನು ಗುರುತಿಸಿ ಪಕ್ಷದ ವತಿಯಿಂದ ಅವಕಾಶ ನೀಡಲಾಗುವುದು. ಪಂಚಾಯಿತಿಯಲ್ಲಿ ಸ್ಪರ್ಧೆಗೆ ಅವಕಾಶ ಸಿಗುವವರಿಗೆ ಸರ್ಕಾರದ ವಿವಿಧ ನಿಗಮ ಮಂಡಳಿಗೆ ಅಧಿಕಾರ ನೀಡಲಾಗುವುದು ಎಂದರು. ಸಂಸದ ಡಿ.ಕೆ ಸುರೇಶ್ ಮಾತನಾಡಿ, ಕಳೆದ ಬಾರಿ ಬಿಜೆಪಿಯಲ್ಲಿದ್ದ ಯೋಗೇಶ್ವರ್ ನಮ್ಮ ಪಕ್ಷದೊಂದಿಗೆ ಕೈ ಜೋಡಿಸಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT