ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಅವರು ಕ್ಷೇತ್ರದ ಸಂಜಯನಗರದಲ್ಲಿ ಶುಕ್ರವಾರ ಮತಯಾಚಿಸಿದರು. 
ಜಿಲ್ಲಾ ಸುದ್ದಿ

ಹೆಬ್ಬಾಳದಲ್ಲಿ ಮತಬೇಟೆ ಶುರು

ಹೆಬ್ಬಾಳ ಉಪ ಚುನಾವಣೆಗೆ ಪ್ರಚಾರದ ಕಾವು ಪಡೆದುಕೊಳ್ಳುತ್ತಿದ್ದು, ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಶುಕ್ರವಾರ ಸಂಜಯನಗರ ವ್ಯಾಪ್ತಿಯಲ್ಲಿ ಮತಬೇಟೆ ಆರಂಭಿಸಿದರು...

ಬೆಂಗಳೂರು: ಹೆಬ್ಬಾಳ ಉಪ ಚುನಾವಣೆಗೆ ಪ್ರಚಾರದ ಕಾವು ಪಡೆದುಕೊಳ್ಳುತ್ತಿದ್ದು, ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಶುಕ್ರವಾರ ಸಂಜಯನಗರ ವ್ಯಾಪ್ತಿಯಲ್ಲಿ ಮತಬೇಟೆ ಆರಂಭಿಸಿದರು.

ನಗರದ ಪ್ರಮುಖರ ಮನೆಗಳಿಗೆ ತೆರಳಿ ಸಮಾಲೋಚನೆ ನಡೆಸಿದ ನಾರಾಯಣ ಸ್ವಾಮಿಗೆ ಕ್ಷೇತ್ರಾದ್ಯಂತ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಪ್ರಚಾರದ ವೇಳೆ ಮತದಾರರು ಹಾಗೂ ಪ್ರಮುಖರು ಆತ್ಮೀಯವಾಗಿ ಸ್ವಾಗತಿಸುತ್ತಿದ್ದಾರೆ. ಸಂಜಯನಗರ ಪ್ರಚಾರದ ವೇಳೆ ಮಾತನಾಡಿದ ಅಭ್ಯರ್ಥಿ ನಾರಾಯಣ ಸ್ವಾಮಿ, ಹೆಬ್ಬಳ ಕ್ಷೇತ್ರದಲ್ಲಿ ಅಭ್ಯರ್ಥಿಯಾಗುವ ಅವಕಾಶ ತಮಗೆ ಈ ಬಾರಿ ದೊರೆತಿದೆ.

ಈ ಸದಾವಕಾಶವನ್ನು ಬಳಸಿಕೊಂಡು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಕ್ಷೇತ್ರದಲ್ಲಿಯೇ ನೆಲೆಸಿರುವ ತಾವು ಮತದಾರರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ, ಬಗೆಹರಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಹೇಳಿದರು.

ಜನಾರುರಾಗವೇ ಶ್ರೀರಕ್ಷೆ
ಹೆಬ್ಬಾಳ ಕ್ಷೇತ್ರದಲ್ಲಿ ಶಾಸಕರಾಗಿ ಉತ್ತಮ ಕೆಲಸವನ್ನು ಮಾಡಿದ ದಿ.ಆರ್.ವಿ.ಜಗದೀಶ್ ಕುಮಾರ್ ಅವರ ಸರಳತೆ, ಸಭ್ಯತೆ ಮತ್ತು ಜನಾನುರಾಗವೇ ನನಗೆ ಶ್ರೀರಕ್ಷೆ. ಅವರು ಮಾಡಿದ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುವುದೂ ಸೇರಿದಂತೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕ್ಷೇತ್ರವನ್ನು ಮಾದರಿಯಾಗಿ ರೂಪಿಸುತ್ತೇನೆ ಎಂದರು. ಇದೇ ವೇಳೆ ಮುಖಂಡರಾದ ತಮ್ಮೇಗೌಡ, ಮಹಾನಗರ ಪಾಲಿಕೆ ಸದಸ್ಯೆ ಇಂದಿರಾ ಸುಭಾಷ್, ಮುನೇಗೌಡ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!