ಬಳ್ಳಾರಿ: ಕೂಡ್ಲಿಗಿ ಡಿವೈಎಸ್ಪಿ ಅನುಪಮಾ ಶೆಣೈ ಅವರ ವರ್ಗಾವಣೆ ಖಂಡಿಸಿ ವಿವಿಧ ಸಂಘಟನೆಗಳು ಶನಿವಾರ ಕೂಡ್ಲಿಗಿ ಬಂದ್‌ಗೆ ಕರೆ ನೀಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ಅವರ ರಾಜೀನಾಮೆ ಪಡೆಯಬೇಕು. ಅನುಪಮಾ ಶೆಣೈ ಅವರ ವರ್ಗಾವಣೆಯನ್ನು ರದ್ದುಗೊಳಿಸಿ ಪುನಃ ಕೂಡ್ಲಿಗಿಗೆ ನೇಮಕ ಮಾಡಬೇಕು ಎಂದು ವಿವಿಧ ಸಂಘಟನೆಗಳ ಸದಸ್ಯರು ಆಗ್ರಹಿಸಿದ್ದಾರೆ.
ಬಂದ್ ಹಿನ್ನಲೆಯಲ್ಲಿ ಕೂಡ್ಲಿಗಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿದ್ದು, ಬಂದ್‌ಗೆ ಬೆಂಬಲ ನೀಡಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.