ಕಸದಲ್ಲಿ ಅರಳಿತು ಕಲೆ; ಸರ್ಕಾರಿ ಮಕ್ಕಳ ಸಾಧನೆ
ಅನುಪಯುಕ್ತ, ತ್ಯಾಜ್ಯ ವಸ್ತುಗಳಿಂದ ಕಲಾಕೃತಿಗಳನ್ನು ತಯಾರಿಸುವ ಮೂಲಕ ಕುರುಬರ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹುಬ್ಬೇರಿಸುವಂತೆ ಮಾಡಿದ್ದಾರೆ...
ಬೆಂಗಳೂರು: ಅನುಪಯುಕ್ತ, ತ್ಯಾಜ್ಯ ವಸ್ತುಗಳಿಂದ ಕಲಾಕೃತಿಗಳನ್ನು ತಯಾರಿಸುವ ಮೂಲಕ ಕುರುಬರ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹುಬ್ಬೇರಿಸುವಂತೆ ಮಾಡಿದ್ದಾರೆ.
ನಗರದ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ಕಲಾಕೃತಿಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕೆಐಐಟಿ ವಿಶ್ವವಿದ್ಯಾಲಯದ ದಕ್ಷಿಣ ವಲಯದ ಮುಖ್ಯಸ್ಥ ಗುರುಪ್ರಸಾದ್, ಕೆಐಐಟಿಯಿಂದ ಆರ್ಟ್ ಆಫ್ ಗಿವಿಂಗ್ ಎಂಬ ಯೋಜನೆ ಹಮ್ಮಿಕೊಳಅಳಲಾಗಿದೆ.
ಅದರಡಿ ಮಾಗಡಿ ರಸ್ತೆಯ ಪೊಲೀಸ್ ಕಾಲೋನಿಯ ಸರ್ಕಾರಿ ಫ್ರೌಢಶಾಲೆಯ (ಜಿಎಚ್ಎಸ್ ಪಿಸಿ)ಹಳೆಯ ವಿದ್ಯಾರ್ಥಿಗಳೊಂದಿಗೆ ಸೇರಿಕೊಂಡು ಮಕ್ಕಳಿಗೆ ಕಲಾಕೃತಿಗಳನ್ನು ತಯಾರಿಸುವ ಬಗ್ಗೆ ತರಬೇತಿ ನೀಡಲಾಗುತ್ತಿದೆ ಎಂದರು.
ನಗರದಲ್ಲಿ ಕಸದ ಸಮಸ್ಯೆ ಹೆಚ್ಚುತ್ತಿದೆ. ಹೀಗಾಗಿ ಕಸದಿಂದ ಕಲಾಕೃತಿಗಳನ್ನು ತಯಾರಿಸಿ ಸಾರ್ವಜನಿಕರಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡದಂತೆ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಎಂದು ಹೇಳಿದರು.