ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 211 ಕಿ.ಮೀ.ಗಳ ಮುಖ್ಯರಸ್ತೆ ಹಾಗೂ ವಾರ್ಡ್ ಮಟ್ಟದ ರಸ್ತೆಗಳ ಅಭಿವೃದ್ಧಿಪಡಿಸುವ ರು.258 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ಸಿಕ್ಕಿದೆ.
ಶನಿವಾರ ಪಾಲಿಕೆಯ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ.ರಾಜ್ ಕುಮಾರ್ ಗಾಜಿನ ಭವನದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ನಗರದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕೆಲಸವನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದೆ. ಇಲಾಖೆಯು ರು.258 ಕೋಟಿ ವೆಚ್ಚದಲ್ಲಿ 112 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದ್ದು, ಫೆ.25ರೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾಮಗಾರಿಗಳ ಗುಣಮಟ್ಟ, ನಿಗದಿತ ಸಮಯದೊಳಗೆ ಪೂರ್ಣಗೊಳಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ.