ಪ್ರಿಯಾ ದತ್ 
ಜಿಲ್ಲಾ ಸುದ್ದಿ

ಮಹಿಳೆಯರಿಗೆ ದೇಗುಲ ಪ್ರವೇಶ ನಿಷೇಧ ಸರಿಯಲ್ಲ

ಮಹಿಳೆಯರಿಗೆ ದೇಗುಲ ಪ್ರವೇಶ ಮಾಡದಂತೆ ನಿಷೇಧ ಹೇರುವುದು ಸರಿಯಲ್ಲ ಎಂದು ಮಾಜಿ ಸಂಸದೆ ಪ್ರಿಯಾದತ್ ಅಭಿಪ್ರಾಯ ಪಟ್ಟಿದ್ದಾರೆ. ..

ಬೆಂಗಳೂರು: ಮಹಿಳೆಯರಿಗೆ ದೇಗುಲ ಪ್ರವೇಶ ಮಾಡದಂತೆ ನಿಷೇಧ ಹೇರುವುದು ಸರಿಯಲ್ಲ ಎಂದು ಮಾಜಿ ಸಂಸದೆ ಪ್ರಿಯಾದತ್ ಅಭಿಪ್ರಾಯ ಪಟ್ಟಿದ್ದಾರೆ.

ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ಹಿಂದೂ, ಮುಸ್ಲಿಂ ಸೇರಿದಂತೆ ಯಾವುದೇ ಸಮುದಾಯವಾದರೂ ಹೆಣ್ಣು ಗಂಡಿನ ನಡುವೆ ಸಮಾನತೆ ಇರಬೇಕು. ನಮ್ಮ ದೇವರ ಪ್ರಾರ್ಥನೆಗೆ ನಮ್ಮ ಶ್ರದ್ಧಾ ಕೇಂದ್ರಗಳಿಗೆ ಹೋಗಬಾರದು ಎಂದರೆ ಹೇಗೆ. ಇದಕ್ಕೆಲ್ಲ ಸಂಪ್ರದಾಯಗಳ ನೆಪ ಹೇಳುವುದು ಸರಿಯಲ್ಲ ಎಂದು ಹೇಳಿದರು.

ಈಗಾಗಲೇ ನಾವು ಬಾಲ್ಯ ವಿವಾಹ, ಸತಿ ಪದ್ಧತಿಯಂತಹಾ ಸಂಪ್ರದಾಯಗಳನ್ನು ಬಿಟ್ಟಿಲ್ಲವೇ ಎಂದು ಪ್ರಶ್ನಿಸಿದ ಅವರು, ಕಾಲಕ್ಕೆ ತಕ್ಕಂತೆ ನಾವೂ ಬದಲಾಗಬೇಕು, ಸಂಪ್ರದಾಯಗಳೂ ಬದಲಾಗಬೇಕು ಎಂದು ತಿಳಿಸಿದರು.

ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ ಮತ್ತು ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣ ಶೋಷಣೆಯ ಪ್ರತೀಕವಾಗಿವೆ. ಸಂಸ್ಕೃತಿ ವಿಚಾರದಲ್ಲಿ ಅತ್ಯಂತ ಸೂಕ್ಷ್ಮತೆಯಿಂದ ವ್ಯವಹರಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಮೆರಿಕ ಯೋಧನ ತಲೆಗೆ 30 ಸಾವಿರ ಡಾಲರ್ ಬಹುಮಾನ: ಇರಾನ್‌ನಿಂದ ವಿಜಯನಗರದ ಅರಸನ ತಂತ್ರ ಬಳಕೆ!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಗದ್ದಲ, 2ನೇ ದಿನವೂ ವಿಧಾನಸಭೆಯ ಕಲಾಪ ಬಲಿ!