ಅನೇಕಲ್: ಕೊಲೆ ಪ್ರಕರಣವೊಂದರ ಆರೋಪಿಯನ್ನು ಸ್ಥಳ ಮಹಜರ್ ಗೆ ಕರೆದೊಯ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ವೃತ್ತ ನಿರೀಕ್ಷಕ ಗುಂಡು ಹಾರಿಸಿದ ಘಟನೆ ನಿರೀಕ್ಷಕ ಗುಂಡು ಹಾರಿಸಿದ ಘಟನೆ ಬೆಂಗಳೂರು ದಕ್ಷಿಣದ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಿಹಾರ ಮೂಲದ ದೀಪಕ್ ಕುಮಾರ್ ಅನಿಲ್ ಕುಮಾರ್ ಎನ್ನುವ ಆರೋಪಿಯೇ ಪೊಲೀಸರಿಂದ ಗುಂಡೇಟು ತಿಂದು ಆಸ್ಪತ್ರೆ ಸೇರಿರುವ ಪಾತಕಿ. ಆರೋಪಿ ಮಾಡಿದ ದಾಳಿಯಲ್ಲಿ ಪಿಎಸ್ ಐ ಮುರಳಿ, ಪೇದೆಗಳಾದ ರಾಜು ಮತ್ತು ದತ್ತಾತ್ರೇಯ ಗಾಯಗೊಂಡಿದ್ದು, ಜಿಗಣಿಯ ಜಯಶ್ರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಗಣಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮಲ್ಲೇಶ್ ಆರೋಪಿಯ ಮೇಲೆ ಗುಂಡು ಹಾರಿಸಿದ ಕಾರಣ ಕಾಲಿಗೆ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿಸಿದರು.