ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಾಗಲಕೋಟೆ

ಗುಳೇದಗುಡ್ಡ: ಲಘು ಲಾಠಿ ಚಾರ್ಜ್

Parashurama
Updated On : 8 Mar 2013, 11:51 am

ಗುಳೇದಗುಡ್ಡ: ಮತಗಟ್ಟೆ ಸಂಖ್ಯೆ 23ರ ಬಿಜೆಪಿ ಅಭ್ಯರ್ಥಿ ನೀಲವ್ವ ಜವಳಿ ಅವರ ಪುತ್ರ ಪ್ರಶಾಂತ ಜವಳಿಯನ್ನು ಕೆಲ ಕಾಂಗ್ರೆಸ್ ಕಾರ್ಯಕರ್ತರು ಥಳಿಸಿದ ಹಿನ್ನೆಲೆಯಲ್ಲಿ, ಮತಗಟ್ಟೆ ಹೊರಗಡೆ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಮಾತಿನ ಚಕಮಕಿ ನಡೆಸಿದ್ದು, ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿಚಾರ್ಜ್ ನಡೆಸಿದರು.
ಬಿಜೆಪಿ ರಾಜ್ಯ ಕೈಮಗ್ಗ ನಿಗಮದ ಅಧ್ಯಕ್ಷ ರಾಜಶೇಖರ ಶೀಲವಂತ, ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಮುತ್ತಣ್ಣ ಕಳ್ಳಿಗುಡ್ಡ, ರವೀಂದ್ರ ಪಟ್ಟಣಶೆಟ್ಟಿ, ಬಸವರಾಜ ಕರನಂದಿ ಹಾಗೂ ಇತರೆ ಬಿಜೆಪಿ ಮುಖಂಡರು ಸ್ಥಳಕ್ಕಾಗಮಿಸಿ ವಾತಾವರಣ ತಿಳಿಗೊಳಿಸಿದರು. ನಂತರ  ಬದಾಮಿಯ ಸಿಪಿಐ ಅಡಿವೇಶ್ ಗುದಿಗೊಪ್ಪ, ಹೆಚ್ಚುವರಿ ಸಿಪಿಐ ಅರುಣ ಕೊಳೂರ ಪರಸ್ಥಿತಿ ತಿಳಿಗೊಳಿಸಿದರು.
ಪಟ್ಟಣದ ಮತಗಟ್ಟೆ ಸಂಖ್ಯೆ 1ರಲ್ಲಿ ಬೆಳಗ್ಗೆ 9 ಗಂಟೆಗೆ ಕೆಲ ಪಕ್ಷಗಳ ಕಾರ್ಯಕರ್ತರು ಮಾತಿನ ಚಕಮಕಿ ನಡೆದು, 10 ನಿಮಿಷ ಮತದಾನ ಸ್ಥಗಿತಗೊಂಡಿತ್ತು. ಮತಗಟ್ಟೆ ಸಂಖ್ಯೆ 16 ಮತ್ತು 17ರಲ್ಲಿಯೂ ಕೂಡಾ ವಿವಿಧ ಪಕ್ಷಗಳ ಕಾರ್ಯಕರ್ತರು ಮತದಾನಕ್ಕೆ ಅಡ್ಡಿಯುಂಟು ಮಾಡಿದ್ದರು. ವಿವಿಧ ಪಕ್ಷಗಳ ಅಭ್ಯರ್ಥಿಗಳು ಬುಹತೇಕ ಕಡೆ ಮತಗಟ್ಟೆ ಸಮೀಪದಲ್ಲಿಯೇ ನಿಂತು ಮತಯಾಚಿಸುತ್ತಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments