ಬಾಗಲಕೋಟೆ

ಬಾಗಲಕೋಟೆಗೆ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಚೇರಿ

-ಚಿಕ್ಕಪ್ಪನಹಳ್ಳಿ ಷಣ್ಮುಖ
ಬಾಗಲಕೋಟೆ: ಚಿತ್ರದುರ್ಗ ಕೇಂದ್ರವಾಗಿರಿಸಿಕೊಂಡು ಕಾರ್ಯ ನಿರ್ವಹಿಸುತ್ತಿರುವ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಇದೀಗ ಮತ್ತೆರೆಡು ಪ್ರಾದೇಶಿಕ ಕಚೇರಿಗಳನ್ನು ಹೊಂದಲಿದೆ.
ಯೋಜನಾ ಖಾತೆ ಸಚಿವ ಎಸ್.ಆರ್.ಪಾಟೀಲ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮಂಡಳಿಯ ಸರ್ವ ಸದಸ್ಯರ ಸಭೆಯಲ್ಲಿ ಈ ಕುರಿತು ನಿರ್ಣಯಕ್ಕೆ ಬರಲಾಗಿದೆ. ಮಂಡಳಿ ವ್ಯಾಪ್ತಿಯ ಕೆಲಸಗಳನ್ನು ಚುರುಕುಗೊಳಿಸಲು ಪ್ರಾದೇಶಿಕ ಕಚೇರಿ ಅಗತ್ಯತೆ ಸಭೆಯಲ್ಲಿ ಬಲವಾಗಿ ಪ್ರಸ್ತಾಪವಾಗಿದೆ. ಅಂತಿಮವಾಗಿ ಬಾಗಲಕೋಟೆ, ಬೆಂಗಳೂರಿನಲ್ಲಿ ತಲಾ ಒಂದೊಂದು ಪ್ರಾದೇಶಿಕ ಕಚೇರಿ ಆರಂಭಿಸುವುದಕ್ಕೆ ಸಭೆ ಒಪ್ಪಿಗೆ ನೀಡಿದೆ.
ಬಾಗಲಕೋಟೆ, ಚಿತ್ರದುರ್ಗ, ರಾಮನಗರ, ಬೆಳಗಾವಿ, ತುಮಕೂರು,ಬೆಂಗಳೂರು ಗ್ರಾಮಾಂತರ ಸೇರಿದಂತೆ ಒಟ್ಟು 14 ಜಿಲ್ಲೆಗಳ 57 ವಿಧಾನಸಭೆ ಕ್ಷೇತ್ರ, 14 ಮಂದಿ ಎಂಪಿ, 24 ಮಂದಿ ಎಂಎಲ್ಸಿ ಹಾಗೂ 14 ಮಂದಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರನ್ನೊಳಗೊಂಡ ವ್ಯಾಪ್ತಿ ಹೊಂದಿರುವ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಅನುದಾನದ ಕೊರತೆಯಿಂದ ಬಸವಳಿದಿದ್ದು 2014-15 ನೇ ಸಾಲಿಗೆ ಅರ್ಧ ಸ್ಪಿಲ್ ಓವರ್ (ಮುಂದುವರಿದ ಕಾಮಗಾರಿ), ಉಳಿದರ್ಧ ನವೀನ ಎನ್ನುವಂತಾಗಿದೆ.
ಹೆಸರಿಗೆ ಮಾತ್ರ...: ಬಯಲು ಸೀಮೆ ಪ್ರದೇಶದಲ್ಲಿ ಜಲಸಂಪನ್ಮೂಲಗಳ ಅಭಿವೃದ್ಧಿ ಮತ್ತು ಸಂರಕ್ಷಣೆ, ಭೂ ಸಾರ ಸಂರಕ್ಷಣೆ, ಅರಣ್ಯಾಭಿವೃದ್ಧಿ, ತೋಟಗಾರಿಕೆ, ಪಶು ಸಂಗೋಪನೆ ಹಾಗೂ ಕೃಷಿ ಚಟುವಟಿಕೆಗೆ ಉತ್ತೇಜನ ನೀಡುವುದು ಮಂಡಳಿಯ ಪ್ರಮುಖ ಉದ್ದೇಶ. ಆದರೆ 14 ಜಿಲ್ಲೆಗಳಲ್ಲಿ ವಿಸ್ತಾರವಾಗಿ ಹರಡಿಕೊಂಡಿರುವ ಮಂಡಳಿಗೆ ಸರ್ಕಾರ ಕಾಯ್ದಿರಿಸಿರುವ ಅನುದಾನ ಮಾತ್ರ ಕೇವಲ ರು. 20 ಕೋಟಿ. ಪ್ರತಿ ಶಾಸಕರು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಅರ್ಧ ಕೋಟಿಯಷ್ಟು ಕಾಮಗಾರಿ ಕೈಗೆತ್ತಿಕೊಳ್ಳಲು ಕೂಡಾ ಸಾಧ್ಯವಾಗುತ್ತಿಲ್ಲ. ಬಯಲು ಸೀಮೆ ಹೆಸರಲ್ಲಿ ಒಂದು ಮಂಡಳಿ ಇರಬೇಕೆಂಬ ಕಾರಣಕ್ಕೆ ಸರ್ಕಾರ ಸ್ಥಾಪಿಸಿದೆಯೋ ಎಂಬ ಭಾವನೆಗಳು ಮೂಡುತ್ತವೆ. ಮಂಡಳಿ ಕ್ರಿಯಾ ಯೋಜನೆ ರೂಪಿಸುವಾಗ ಶೇಕಡಾ 60ರ ಅನುದಾನಕ್ಕೆ  ಕಡಿಮೆ ಇಲ್ಲದಂತೆ  ಅಂತರ್ಜಲ, ಕೃಷಿ ಸಂಬಂಧಿಸಿದ ಚಟುವಟಿಕೆಗೆ ಪ್ರಾಧಾನ್ಯತೆ ನೀಡಲಾಗುತ್ತದೆ. ಉಳಿದ 40ರಷ್ಟು ಅನುದಾನ ಎಂದಿನಂತೆ ರಸ್ತೆ,  ಸೇತುವೆ, ಕಟ್ಟಡಗಳ ಪಾಲಾಗುತ್ತದೆ. ಮಂಡಳಿ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ನಬಾರ್ಡ್ ಅಲ್ಪ ಪ್ರಮಾಣದ ನೆರವು ನೀಡುತ್ತಿತ್ತು. ಆದರೆ 2014-15ನೇ ಸಾಲಿಗೆ ನೆರವು ಸ್ಥಗಿತವಾಗಿದೆ. ಹಾಗಾಗಿ ಸರ್ಕಾರದ ಅನುದಾನದಲ್ಲೇ ಕಾಮಗಾರಿ ನಿರ್ವಹಿಸಬೇಕಾದ ಅನಿವಾರ್ಯತೆ ಮಂಡಳಿಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!