ಬಾಗಲಕೋಟೆ: ಬಿಜಾಪುರ- ಬಾಗಲಕೋಟೆ ಲೋಕಾಯುಕ್ತ ಡಿಎಸ್ಪಿ ಎಸ್.ಪಿ. ತೋಳಮಟ್ಟಿ ವಿರುದ್ಧ ಕ್ರಿಮಿನಲ್ ಪ್ರಕರಣ ಇರುವ ಹಿನ್ನೆಲೆಯಲ್ಲಿ ಅವರನ್ನು ಲೋಕಾಯುಕ್ತ ಸೇವೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಡಾ. ವೈ. ಭಾಸ್ಕರ್ ರಾವ್ ಹೇಳಿದ್ದಾರೆ.
ತೋಳಮಟ್ಟಿ ವಿರುದ್ಧ ಕ್ರಿಮಿನಲ್ ಪ್ರಕರಣ ಇರುವುದು ಮಂಗಳವಾರ ತಮ್ಮ ಗಮನಕ್ಕೆ ಬಂದಿದ್ದು, ಕೂಡಲೇ ಅವರನ್ನು ಲೋಕಾಯುಕ್ತ ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಭ್ರಷ್ಟ ಅಧಿಕಾರಿಗಳು ಎಲ್ಲೇ ಇರಲಿ, ಎಷ್ಟೇ ಪ್ರಭಾವಿಶಾಲಿಯಾಗಿರಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾವ್ ತಿಳಿಸಿದ್ದಾರೆ.
ಈ ಹಿಂದೆ ಬಾಗಲಕೋಟೆ ಗ್ರಾಮೀಣ ಠಾಣೆಯ ಸಿಪಿಐ ಆಗಿದ್ದಾಗ ತೋಳಮಟ್ಟಿ ಅವರು ಅದಕ್ಕೂ ಹಿಂದಿನ ಸಿಪಿಐ ಅವರು ನಕಲಿ ಸಹಿ ಮಾಡಿ ಜಫು ್ತ ಪಂಚನಾಮೆಯನ್ನು ತಿದ್ದುಪಡಿ ಮಾಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಆರೋಪವಿದ್ದು, ಅದರ ಕುರಿತು ತನಿಖೆ ನಡೆಯುತ್ತಿದೆ. ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು, ಸಿಐಡಿ ತನಿಖೆ ನಡೆಸುವಂತೆಯೂ ಉತ್ತರ ವಲಯ ಐಜಿಪಿ ಅವರು ಪೊಲೀಸ್ ಮಹಾನಿರ್ದೇಶಕರನ್ನು ಕೋರಿದ್ದಾರೆ.