ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ಬಾಲಕೃಷ್ಣ
ಮಾಗಡಿ: ಸಿದ್ದಗಂಗಾ ಮಠಾಧ್ಯಕ್ಷ ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿ ಅವರ ಕೃಪಾಶೀರ್ವಾದವೇ ನನ್ನ ಗೆಲವಿಗೆ ಶ್ರೀರಕ್ಷೆಯಾಗಲಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ತಿಳಿಸಿದರು.
ಅವರು ಸಿದ್ದಗಂಗಾ ಶ್ರೀಗಳ 106ನೇ ಹುಟ್ಟು ಹಬ್ಬದ ಪ್ರಯುಕ್ತ ಸೋಮವಾರ ಮಠಕ್ಕೆ ಭೇಟಿ ನೀಡಿ ಶ್ರೀಗಳಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.
ನಂತರ ಮಾಗಡಿಗೆ ಆಗಮಿಸಿದ ಶಾಸಕ ಬಾಲಕೃಷ್ಣ ತಾಲೂಕಿನ ಪ್ರಸಿದ್ಧ ಶ್ರೀಪತಿ ಹಳ್ಳಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಶ್ರೀಗಳ ಕೃಪಾಶೀರ್ವದದಿಂದ ಚುನಾವಣಾ ಪ್ರಚಾರ ಆರಂಭಿಸಿದ್ದಾಗಿ ತಿಳಿಸಿದರು.
ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೆ.ಮುದ್ದುರಾಜ ಯಾದವ್, ಜಿ.ಪಂ. ಸದಸ್ಯರಾದ ಧನಂಜಯ, ವಿಜಯಕುಮಾರ್, ಬಮೂಲ್ ನಿರ್ದೇಶಕ ನರಸಿಂಹಮೂರ್ತಿ, ತಾಲೂಕು ಜೆಡಿಎಸ್ ಅಧ್ಯಕ್ಷ ಪೊಲೀಸ್ ರಾಮಣ್ಣಸ ತಾ.ಪಂ. ಅಧ್ಯಕ್ಷ ವೆಂಕಟೇಶ್, ಕಾಂತರಾಜು, ನಾಗರಾಜು, ಕಲ್ಯ ಪಂಚಾಯ್ತಿ ಅರುಂಧತಿ ಚಿಕ್ಕಣ್ಣ, ಶ್ರೀನಿವಾಸ್,ಅರುಣ್, ಮೂರ್ತಿ,ರಾಜು,ತಿಮ್ಮಪ್ಪ, ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.