ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಿ ಬೆಳೆಸಲು ಮುಂದಾಗಿ

Rashmi Kasaragodu
Updated On : 5 Apr 2013, 1:01 am

ರಾಮನಗರ: ಮತದಾನ ನಡೆಸುವಂತೆ ಪೋಷಕರು, ಹಿರಿಯ ನಾಗರಿಕರನ್ನು ಪ್ರೇರೇಪಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿ ಬೆಳೆಸಲು ಮುಂದಾಗಿ ಎಂದು ಜಿ.ಪಂ. ಸಿಇಒ ಡಾ.ಎಂ.ವಿ.ವೆಂಕಟೇಶ್ ವಿದ್ಯಾರ್ಥಿ, ಯುವ ಜನತೆಗೆ ಕರೆ ನೀಡಿದರು.  
ನಗರದ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ಆಯೋಜಿಸಿದ್ದ ಮತದಾರರ ಪಾತ್ರ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶವನ್ನು ಔನತ್ಯಕ್ಕೆ ಕೊಂಡೊಯ್ಯಲು ಪ್ರತಿಶತ 100ರಷ್ಟು ಮತದಾನ ಆಗಬೇಕು ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಜಯರಾಂ ಮಾತನಾಡಿ, ಮತದಾನದಲ್ಲಿ ಯುವ ಜನರ ಪಾತ್ರ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವದ ತತ್ವ, ಸಿದ್ಧಾಂತಗಳನ್ನು ತಿಳಿಸಿ ಮತದಾನದ ಪ್ರಮಾಣವನ್ನು ಹೆಚ್ಚಳ ಮಾಡಬೇಕು ಎಂದು ಸಲಹೆ ನೀಡಿದರು.  
ಕಾಲೇಜಿನ ಪ್ರಾಂಶುಪಾಲ ಕುಮಾರ್, ಪ್ರೊ.ರಂಗಸ್ವಾಮಿಗೌಡ, ರಾಷ್ಟ್ರೀಯ ಸೇವಾ ಯೋಜನೆ ಸಂಚಾಲಕ ಶೇಖ್ ಹೈದರಾಲಿ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement