ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಮಾಜಿ ಪ್ರಧಾನಿ ಜಯಂತಿ

Rashmi Kasaragodu
Updated On : 6 Apr 2013, 11:55 am

ರಾಮನಗರ: ಮಾಜಿ ಉಪ ಪ್ರಧಾನಿ ದಿ.ಡಾ.ಬಾಬು ಜಗಜೀವನ್‌ರಾಂ ಆದರ್ಶ ಹಾಗೂವಿಚಾರ ಧಾರೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಜಿಲ್ಲಾಧಿಕಾರಿ ನವೀನ್‌ರಾಜ್‌ಸಿಂಗ್ ಕಿವಿಮಾತು ಹೇಳಿದರು.  
ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯಿಂದ ಶುಕ್ರವಾರ ನಡೆದ ಡಾ.ಬಾಬು ಜಗಜೀವನ್‌ರಾಂ 106ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.  ಪ್ರಾಧ್ಯಾಪಕ ಡಾ.ಎಚ್.ಎಸ್.ಭುವನೇಶ್ವರ ಪ್ರಧಾನ ಭಾಷಣ ಮಾಡಿದರು. ಅಪರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಜಿ.ಪಂ.ಉಪ ಕಾರ್ಯದರ್ಶಿ ಸಿ.ಸಿದ್ದರಾಮಯ್ಯ, ಪೊಲೀಸ್ ಇಲಾಖೆ ಉಪ ಅಧೀಕ್ಷಕ ರಾಮಕೃಷ್ಣಪ್ಪ, ನಗರಸಭೆ ಪೌರಾಯುಕ್ತ ಜಿ.ಎ.ಯಶವಂತ್ ಮತ್ತಿತರರು ಉಪಸ್ಥಿತರಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement