ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಗ್ರಾಮೀಣ ಬದುಕು ತಿಳಿಯಲು ಎನ್‌ಎಸ್‌ಎಸ್ ಸಹಕಾರಿ

Rashmi Kasaragodu
Updated On : 7 Apr 2013, 12:28 pm

ಕ.ಪ್ರ.ವಾರ್ತೆ  ದೊಡ್ಡಬಳ್ಳಾಪುರ  ಏ.6
ಗ್ರಾಮೀಣ ಪ್ರದೇಶದ ಜನರ ಬದುಕಿನ ಸಂವೇದನೆಗಳನ್ನು ಅರ್ಥ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳು ಸಹಕಾರಿಯಾಗಿವೆ ಎಂದು ಬೆಂ.ಗ್ರಾ.ಜಿಲ್ಲಾ ಡಯಟ್‌ನ ಉಪನಿರ್ದೇಶಕ ಎಂ.ಪಿ.ಮಾದೇಗೌಡ ಹೇಳಿದರು.
ತಾಲೂಕಿನ ಚಿಕ್ಕಬೆಳವಂಗಲ ಗ್ರಾಮದಲ್ಲಿ ಕೋಲಿಗೆರೆಯ ಸತೀಶ್ಚಂದ್ರ ಸ್ಮಾರಕ ಶಿಕ್ಷಕರ ತರಬೇತಿ ಸಂಸ್ಥೆಯ ನೇತೃತ್ವದಲ್ಲಿ ಆರಂಭವಾದ ರಾಷ್ಟ್ರೀಯ ಸೇವಾ ಯೋಜನೆ 7 ದಿನಗಳ ವಿಶೇಷ ಯುವಜನ ಸೇವಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ದೇಶದ ಭವಿಷ್ಯತ್ತನ್ನು ನಿರ್ಮಾಣ ಮಾಡುವ ಹಳ್ಳಿಗರು ಯಾವ ರೀತಿಯ ಸಂಕಷ್ಟದ ಸ್ಥಿತಿಯಲ್ಲಿದ್ದಾರೆ ಮತ್ತು ಸಮಕಾಲೀನ ಸವಾಲುಗಳಿಗೆ ಹೇಗೆ ಉತ್ತರಗಳನ್ನು ಕಂಡುಕೊಳ್ಳುವ ಪ್ರಯತ್ನ ಮಾಡುತ್ತಾರೆ ಎಂಬುದರ ಅರಿವು ಪ್ರತಿಯೊಬ್ಬರಿಗೂ ಮುಖ್ಯ. ಶಿಬಿರಗಳಿಂದ ನಾವು ಕಲಿಯಬೇಕಾದ್ದು ಬಹಳಷ್ಟಿರುತ್ತದೆ. ಶಿಸ್ತು-ವೈಚಾರಿಕ ಮನೋಭಾವ ಬೆಳೆಸಿಕೊಳ್ಳುವುದು ಮುಖ್ಯ. ವಿದ್ಯಾರ್ಥಿ ದೆಸೆಯಲ್ಲಿ ನಾಗರೀಕ ಶಿಸ್ತುಗಳ ಬಗ್ಗೆ ಅರಿವು ಮೂಡಿಸಿಕೊಳ್ಳಲು ಗಾಂಧಿ ಚಿಂತನೆ ಮತ್ತು ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಟಿ.ಕೆ.ಆಂಜನೇಯಮೂರ್ತಿ ಮಾತನಾಡಿ, ಕುಗ್ರಾಮಗಳಲ್ಲಿ ವಿದ್ಯಾರ್ಥಿಗಳು ಜೀವನಾನುಭವವನ್ನು ಪಡೆಯಬೇಕು. ಕಾಲೇಜು ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಕೇವಲ ಪಠ್ಯ ಚಟುವಟಿಕೆಗಳಿಗೇ ಸೀಮಿತವಾಗದೆ ತಮ್ಮ ಆಲೋಚನೆಗಳನ್ನು ಇತರ ವಿಚಾರಗಳಿಗೂ ವಿಸ್ತರಿಸಿಕೊಳ್ಳಬೇಕು. ಈ ಹಂತದಲ್ಲಿ ಎನ್‌ಎಸ್‌ಎಸ್ ಬಹುಮುಖ್ಯ ಪಾತ್ರ ನಿರ್ವಹಿಸುತ್ತದೆ ಎಂದರು.
ದೊಡ್ಡಬೆಳವಂಗಲ ಎಸೈ ಶಿವಕುಮಾರ್, ಜಯಲಕ್ಷ್ಮಿ, ರಾಮನಾಥ್, ಪ್ರಾಂಶುಪಾಲ ರಿಯಾಜುದ್ದೀನ್, ಎಂ.ಮುನಿರಾಜು, ಬಸವರಾಜು, ಅನಿಲ್‌ಕುಮಾರ್, ಪರಶಿವಮೂರ್ತಿ, ಲತಾದೇವಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement