ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ರಾಜಕೀಯ ನಡೆ ನಿರ್ಧರಿಸಲು ಇಂದು ಸಭೆ

Rashmi Kasaragodu
Updated On : 7 Apr 2013, 12:28 pm

ರಾಮನಗರ: ಮಾಗಡಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ಎಚ್.ಎಂ.ಕೃಷ್ಣಮೂರ್ತಿ(ಜೇಡ್ರಳ್ಳಿ ಕೃಷ್ಣಪ್ಪ) ತಮ್ಮ ಮುಂದಿನ ರಾಜಕೀಯ ನಡೆ ನಿರ್ಧರಿಸಲು ನಾಳೆ(ಏ.7) ಮಾಗಡಿ ಪಟ್ಟಣದಲ್ಲಿ ಬೆಂಬಲಿಗರು ಹಾಗೂ ಹಿತೈಷಿಗಳ ಸಭೆ ಕರೆದಿದ್ದಾರೆ.
ಮಾಗಡಿ ಪಟ್ಟಣದ ಕಲ್ಯಾ ಗೇಟ್ ಬಳಿಯಿರುವ ತಮ್ಮ ಕಚೇರಿ ಆವರಣದಲ್ಲಿ ಮಧ್ಯಾಹ್ನ 12ಕ್ಕೆ ಸಭೆ ಕರೆದಿದ್ದಾರೆ. ಈ ಸಭೆಯು ಪ್ರಸಕ್ತ ಚುನಾವಣೆಯಲ್ಲಿ ಜೇಡ್ರಳ್ಳಿ ಕೃಷ್ಣಪ್ಪ ಅವರ ರಾಜಕೀಯ ನಡೆಯನ್ನು ನಿರ್ಧರಿಸುವ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್ ತಮಗೆ ಟಿಕೆಟ್ ನಿರಾಕರಿಸಿದೆ. ಚುನಾವಣೆಯಲ್ಲಿ ಸ್ಪರ್ಧಿಸಬೇಕೇ, ಬೇಡವೇ,  ಸ್ಪರ್ಧಿಸುವುದಾದರೆ ಯಾವ ಪಕ್ಷ ಸೂಕ್ತ ಎನ್ನುವುದನ್ನು ಬೆಂಬಲಿಗರು ಮತ್ತು ಹಿತೈಷಿಗಳು ತೀರ್ಮಾನಿಸಲಿದ್ದಾರೆ. ಬಹುಸಂಖ್ಯಾತರ ಅಭಿಪ್ರಾಯಕ್ಕೆ ಮನ್ನಣೆ ನೀಡಿ, ಶೀಘ್ರ ನಿಲವು ಪ್ರಕಟಿಸುವುದಾಗಿ ಕೃಷ್ಣಪ್ಪ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement