ಪುರಸಭೆ ನೀರಿನ ಸಮಸ್ಯೆ ನೀಗಿಸಲು ಟ್ಯಾಂಕರ್ ಖರೀದಿ
ವಿಜಯಪುರ: ಪಟ್ಟಣದ ಪುರಸಭಾ ವತಿಯಿಂದ ಪಟ್ಟಣದಲ್ಲಿ ನೀರಿನ ಸಮಸ್ಯೆ ನಿವಾರಣೆಗೆ 2011-13 ನೇ ಸಾಲಿನ ಎಸ್.ಎಫ್.ಸಿ ಅನುದಾನದಡಿಯಲ್ಲಿ 9.30 ಲಕ್ಷ ರು. ವೆಚ್ಚದಲ್ಲಿ 2 ಟ್ಯಾಂಕರ್ ಖರೀದಿಸಲಾಗಿದೆ ಎಂದು ಪುರಸಭಾ ಮುಖ್ಯಾಧಿಕಾರಿ ಮುನಿಸ್ವಾಮಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪುರಸಭಾ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇದ್ದು ಖಾಸಗಿ ಟ್ಯಾಂಕರ್‌ಗಳಿಂದ ನೀರು ಸರಬರಾಜು ಮಾಡಲಾಗುತ್ತಿದ್ದು ಹಾಗೂ ಪಟ್ಟಣದ ಕಸ ವಿಲೇವಾರಿ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಪುರಸಭಾ ವತಿಯಿಂದ 2 ಟ್ಯಾಂಕರ್‌ಗಳನ್ನು ಖರೀದಿಸಲಾಗಿದೆ ಎಂದರು. ಪುರಸಭೆಯ ಪರಿಸರ ಅಭ್ಯಯಂತರ ಮಮತ, ಪುರಸಭಾ ಮಾಜಿ ಸದಸ್ಯ ಸಂಪತ್ ಕುಮಾರ್ ಇದ್ದರು.