ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಬಾಂಬ್ ಬ್ಲಾಸ್ಟ್ ಪ್ರಕರಣ: ಆರೋಪಿ ನಾಸೀರ್ ನ್ಯಾಯಾಲಯಕ್ಕೆ ಹಾಜರ್

Rashmi Kasaragodu
Updated On : 9 Apr 2013, 12:03 pm

ಚನ್ನಪಟ್ಟಣ: ಬೆಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ನಾಸೀರ್‌ನನ್ನು ಸೋಮವಾರ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ನ್ಯಾಯಾಧೀಶರು ವಿಚಾರಣೆಯನ್ನು ಮುಂದೂಡಿದ್ದು, ಮುಂದೆ ಈ ಪ್ರಕರಣವನ್ನು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಿರುವುದಾಗಿ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. 2008ರಲ್ಲಿ ನಡೆದ ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಸಮಯಲ್ಲಿ ಪಟ್ಟಣದ ಮಂಗಳವಾರ ಪೇಟೆಯ ಬಳಿ ಲಘು ಸ್ಫೋಟ ಸಂಭವಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರು ಈ ಸಂಬಂಧ ಕೇರಳ ಮೂಲದವರನ್ನು ಬಂಧಿಸಿದ್ದು ನಾಸೀರ್ ಈ ಪ್ರಕರಣ ಪ್ರಮುಖ ಆರೋಪಿ.
ಇಲ್ಲಿ ನಡೆದ ಬಾಂಬ್  ಬ್ಲ್ಲಾಸ್ಟ್‌ಗೆ ಸಂಬಂಧಿಸಿದಂತೆ ತಾಲೂಕು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ವಿಡಿಯೋ  ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯಲಿರುವುದರಿಂದ ಪ್ರಕರಣವನ್ನು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಯಾಗಲಿದೆ.
ವರ್ಗಾವಣೆಗೆ ಭದ್ರತೆ ಕಾರಣ: ಪ್ರಕರಣವನ್ನು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಆರೋಪಿಯನ್ನು ಪದೇ ಪದೆ ನ್ಯಾಯಾಲಯಕ್ಕೆ ಕರೆತರಲು ಭದ್ರತೆಯ ಸಮಸ್ಯೆ ಇರುವುದೇ ಪ್ರಮುಖ ಕಾರಣವಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಆರೋಪಿಗಳನ್ನು ಇರಿಸಿದ್ದು ವಿಚಾರಣೆಯ ವೇಳೆ ಇಲ್ಲಿನ ನ್ಯಾಯಾಲಯಕ್ಕೆ ಆರೋಪಿಗಳನ್ನು ಕರೆತರುವುದು ಪೊಲೀಸರಿಗೆ ಸವಾಲಿನ ಕೆಲಸವಾಗಿದ್ದು ಇದರಿಂದಾಗಿ ಮುಂದಿನ ದಿನಗಳಲ್ಲಿ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಿದ್ದು ಈ ಕಾರಣದಿಂದ ಪ್ರಕರಣವನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement