14 ರಂದು ಅಂಬೇಡ್ಕರ್ ಜಯಂತಿ
ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯಿಂದ ಡಾ.ಬಿ.ಆರ್.ಅಂಬೇಡ್ಕರ್ ದಿನಾಚರಣೆ ಕಾರ್ಯಕ್ರಮವು ನಗರದ ಅಂಬೇಡ್ಕರ್ ಭವನದಲ್ಲಿ ಏ.14ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ. ಕಾರ್ಯಕ್ರಮವನ್ನು ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಎಂ.ವಿ.ವೆಂಕಟೆಶ್ ಉದ್ಘಾಟಿಸುವರು. ಜಿಲ್ಲಾಧಿಕಾರಿ ನವೀನ್ರಾಜ್ಸಿಂಗ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯನರಸಿಂಹ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಟಿ.ಎಸ್.ತಿಮ್ಮಪ್ಪ, ನಗರಸಭೆ ಪೌರಾಯುಕ್ತ ಯಶವಂತ್ ಕುಮಾರ್ ಭಾಗವಹಿಸುವರು.