'ಸಚ್ಚಾರಿತ್ರ್ಯದಿಂದ ಶಿಕ್ಷಣ ಸಾರ್ಥಕ'
ಕ.ಪ್ರಭ. ವಾರ್ತೆ ಹೊಸಕೋಟೆ ಏ.10
ವಿದ್ಯಾರ್ಥಿಗಳು ಕೇವಲ ಪಠ್ಯಾಭ್ಯಾಸಕ್ಕೆ ಮಾತ್ರ ಸೀಮಿತಗೊಳ್ಳದೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡಲ್ಲಿ ಮಾತ್ರ ಶಿಕ್ಷಣ ಸಾರ್ಥಕವಾಗಿದೆ ಎಂದು ಕರವೇ ಅಧ್ಯಕ್ಷ ಸಿ.ಜಯರಾಜ ಹೇಳಿದರು.
ಪಟ್ಟಣದ ಸರಕಾರಿ ಪ್ರಥಮ ದರ್ಜಿ ಕಾಲೇಜು ವಾರ್ಷಿಕೋತ್ಸವದಲ್ಲಿ ಮಾತನಾಡಿ ಸ್ವಾಮಿ ವಿವೇಕಾನಂದರಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅಳವಡಿಸಿಕೊಂಡು ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದರು.
ಪ್ರೊ ಸಿ.ಮರಿರಾಜ್ ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಜೊತೆಗೆ ಕ್ರಿಡೆ, ಸಾಂಸ್ಕೃತಿಕ, ಎನ್ಎಸ್ಎಸ್ ಮತ್ತು ಎನ್.ಸಿ.ಸಿ. ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಕರೆ ನೀಡಿದರು.