17ರಂದು ನಾಮಪತ್ರ: ಕೃಷ್ಣಮೂರ್ತಿ
ಮಾಗಡಿ: ಏ.17 ರಂದು ಮಾಗಡಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸುವುದಾಗಿ ಕೆಂಪೇಗೌಡ ಅಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ತಿಳಿಸಿದ್ದಾರೆ. ಈ ಸಂಬಂಧ ಪಟ್ಟಣದ ಸಂಘದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಟಿಕೆಟ್ ಆಕಾಂಕ್ಷಿಯಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದು, ಬಹುತೇಕ ನನಗೆ ಟಿಕೆಟ್ ಸಿಗಬಹುದು ಎಂಬ ವಿಶ್ವಾಸ ಹೊಂದಿದ್ದೇನೆ. ಏನೇ ಆದರೂ ಏ.17 ರಂದು ಮಾಗಡಿ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವುದು ಶತಃಸಿದ್ದ ಎಂದು ತಿಳಿಸಿದರು. ಇದಕ್ಕೂ ಮುನ್ನಾ ಏ.15 ರಂದು ಕ್ಷೇತ್ರದ್ಯಾಂತ ಗ್ರಾಮ ಸಂಚಾರ ನಡೆಸುವ ಚಿಂತನೆ ನಡೆಸಿದ್ದು, ಈ ಸಂಬಂಧ ಸಂಬಂಧಪಟ್ಟ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯಲು ಅರ್ಜಿ ಸಲ್ಲಿಸಿರುವುದಾಗಿ ವಿವರಿಸಿದರು.