ಇಂದು ಯುಗಾದಿ ಉತ್ಸವ
ಸೂಲಿಬೆಲೆ: ಇಲ್ಲಿನ ಶಿರಡಿ ಸಾಯಿಬಾಬಾ ದೇಗುಲದ ಆವರಣದಲ್ಲಿ ಏ.13 ರಂದು ಯುಗಾದಿ ಉತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸ್ವಾಮಿ ವಿವೇಕಾನಂದರ 150 ಜನ್ಮ ದಿನಾಚರಣಿ ಅಂಗವಾಗಿ ಹಮ್ಮಿಕೊಂಡಿರುವ ಉತ್ಸವದಲ್ಲಿ ಯುಗಾದಿ ಹಬ್ಬದ ವೈಶಿಷ್ಟ್ಯ ಸಾದರಪಡಿಸುವ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನ.ನಾಗರಾಜ್, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಅನೇಕ ಸಾಧು, ಸಂತರು ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಾವರ್ಜನಿಕರು ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ.