ಬೈಕ್ ಡಿಕ್ಕಿ: ಯುವಕ ಸಾವು
ಆನೇಕಲ್ಲು: ತಾತನೊಂದಿಗೆ ಬೈಕ್‌ನಲ್ಲಿ ಚಲಿಸುತ್ತಿದ್ದ ಯುವಕನಿಗೆ ಹಿಂದಿನಿಂದ ವೇಗವಾಗಿ ಬಂದ ಟೆಂಪೋ ವೊಂದು ಡಿಕ್ಕಿ ಹೊಡೆದು, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೆಬ್ಬಗೋಡಿ ಠಾಣಾ ವ್ಯಾಪ್ತಿಯ ಚಂದಾಪುರದಲ್ಲಿ ನಡೆದಿದೆ. ಟೆಂಪೋ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಯುವಕ ತರುಣ್(18) ಎನ್ನಲಾಗಿದ್ದು, ಮೃತನ ತಾತಾ ಸಣ್ಣ ಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ.
ಮೃತ ತರುಣ್ ತಾಯಿ ಭಾರತಿ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದು ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡು ದುಃಖದ ಮಡಿಲಲ್ಲಿದ್ದಾರೆ.