ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ದ್ವಿಚಕ್ರ ವಾಹನಗಳ ಡಿಕ್ಕಿ: ಬೈಕ್ ಸವಾರ ಸಾವು

Mainashree
Updated On : 14 Apr 2013, 12:07 pm

ಚನ್ನಪಟ್ಟಣ: ದ್ವಿಚಕ್ರವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿದ್ದು ಮತ್ತೊಬ್ಬ ತೀವ್ರ ಗಾಯ ಗೊಂಡಿರುವ ಘಟನೆ ತಾಲೂಕಿನ ಕೋಡಂಬಹಳ್ಳಿ ಗ್ರಾಮದ ಕೆರೆ ಏರಿಮೇಲೆ ಸಂಭವಿಸಿದೆ. ತಾಲೂಕಿನ ಹೊನ್ನಿಗಾನ ಹಳ್ಳಿ ಗ್ರಾಮದ ಭರತ್(20) ಮೃತ ದುರ್ದೈವಿ. ಘಟನೆಯಲ್ಲಿ ಶಿವಣ್ಣ ತೀವ್ರ ಗಾಯ ಗೊಂಡಿದ್ದು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಡಂಬಹಳ್ಳಿ ಯಿಂದ ತಮ್ಮ ಸ್ವಗ್ರಾಮಕ್ಕೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ಭರತ್‌ಗೆ ಎದುರಿನಿಂದ ದ್ವಿಚಕ್ರವಾಹನದಲ್ಲಿ ಬಂದ ಶಿವಣ್ಣ ಡಿಕ್ಕಿ ಹೊಡೆದಿದ್ದಾರೆ. ತೀವ್ರ ಗಾಯ ಗೊಂಡಿದ್ದ ಭರತ್‌ನನ್ನು ನಿಮಾನ್ಸ್‌ಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಕ್ಕೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement