ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ನಾಳೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Mainashree
Updated On : 14 Apr 2013, 12:07 pm

ಕ.ಪ್ರ. ವಾರ್ತೆ  ನೆಲಮಂಗಲ  ಏ.13
ಸ್ಥಳೀಯ ವಿಧಾನಸಭಾ ಮೀಸಲು ಕ್ಷೇತ್ರದ ಚುನಾವಣೆಗೆ ಉಮೇದುದಾರರಾಗಿ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಶುಭ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಮಾಜಿ ಸಚಿವ ಅಂಜನಮೂರ್ತಿ ಅವರು ಸೋಮವಾರ ಪಟ್ಟಣದ ಕವಾಡಿಮಠದ ವೀರಭದ್ರಸ್ವಾಮಿಗೆ ಪೂಜೆ ಸಲ್ಲಿಸಿ ನಂತರ 2 ಘಂಟೆಗೆ ಕಾರ್ಯಕರ್ತರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.
ಬಿಜೆಪಿಯಿಂದ ಅಭ್ಯರ್ಥಿಯಾಗಿ ಶಾಸಕ ಎಂ.ವಿ. ನಾಗರಾಜು ಅವರು ಶ್ರೀಕ್ಷೇತ್ರ ಶಿವಗಂಗೆಯ ಉದ್ಭವ ಗಣಪತಿ ದೇವರಿಗೆ ಪೂಜೆ ಸಲ್ಲಿಸಿ ನಂತರ ಪಟ್ಟಣದ ಪ್ರವಾಸ ಮಂದಿರದಿಂದ ಕಾರ್ಯಕರ್ತರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.
ಕೆಜೆಪಿ ಪಕ್ಷದ ವತಿಯಿಂದ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರಾದ ಎಚ್.ಪಿ.ಚಲುವರಾಜು ಶಿವಗಂಗೆಯ ಉದ್ಭವ ಗಣಪತಿಗೆ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಲಿದ್ದಾರೆ. ಜೆಡಿಎಸ್‌ನಿಂದ ಅಭ್ಯರ್ಥಿ ಡಾ.ಶ್ರೀನಿವಾಸಮೂರ್ತಿ, ಬಿಎಸ್ಪಿಯಿಂದ ಅಭ್ಯರ್ಥಿ ಡಾ.ಪಿ.ಹನುಮಯ್ಯ ಅವರು ಬುಧವಾರದಂದು ನಾಮಪತ್ರ ಸಲ್ಲಿಸುತ್ತಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement