ಮರಳು ಅಡ್ಡೆ ಮೇಲೆ ಜಿಲ್ಲಾಧಿಕಾರಿ ದಾಳಿ
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಏ.14
ಅಕ್ರಮ ಮರಳು ಗಣಿಗಾರಿಕೆ ಎಲ್ಲೆಡೆ ನಡೆಯುತ್ತಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿ ಬರುತ್ತಿದ್ದರೂ ಸುಮ್ಮನಿರುವಅಧಿಕಾರಿಗಳ ಧೋರಣೆಯ ನಡುವೆಜಿಲ್ಲಾಧಿಕಾರಿ ವಿ. ಶಂಕರ್ ಅವರು ಭಾನುವಾರ ಬೆಳ್ಳಂಬೆಳಗ್ಗೆಯೇ ಜಕ್ಕಲಮಡುಗು ಜಲಾಶಯಕ್ಕೆ ಅನಿರೀಕ್ಷಿತ ಭೇಟಿ ನೀಡಿ ಅಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ನಡೆಯುತ್ತಿದ್ದ ದಂಧೆಕೋರರಿಗೆ ಶಾಕ್ ನೀಡಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಜಕ್ಕಲಮಡಗು ಜಲಾಶಯದಲ್ಲಿಯೇ ಮರಳು ಸಾಗಾಣಿಕೆ ಅಕ್ರಮವಾಗಿ ನಡೆಯುತ್ತಿರುವುದರ ಬಗ್ಗೆ ಮಾಹಿತಿ ಪಡೆದುಕೊಂಡು ಅನಿರೀಕ್ಷಿತವಾಗಿ ಭೇಟಿ ನೀಡಿದ ಅವರು, ಅಕ್ರಮ ಮರಳು ಗಣಿಗಾರಿಕೆಯನ್ನು ಸ್ವಯಂ ಕಣ್ಣಾರೆ ಕಂಡರು. ಅಲ್ಲದೆ, ಮರಳು ಸಾಗಾಣಿಕೆಗೆ ಬಳಕೆ ಮಾಡುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿ, ಇನ್ನೂ ಮುಂದೆ ಇಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ನಡೆಯದಂತೆ ಗಮನಹರಿಸಬೇಕೆಂದು ಎಚ್ಚರಿಕೆ ನೀಡಿದರು.