ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸೂಲಿಬೆಲೆ ಟೌನ್ ಶಾಲೆಯಲ್ಲಿ ಅಂಬೇಡ್ಕರ್‌ಗೆ ನಮನ

Mainashree
Updated On : 15 Apr 2013, 12:39 pm

ಕ.ಪ್ರ. ವಾರ್ತೆ ಸೂಲಿಬೆಲೆ ಏ.14
ಪಟ್ಟಣದ ಟೌನ್ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 122ನೇ ಜನ್ಮ ದಿನಾಚರಣಿ ಕಾರ್ಯಕ್ರಮ ಸರಳವಾಗಿ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ವೈ. ನಾಗರಾಜ್  ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ನಮಿಸುವ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಹೊಸಕೋಟೆ ತಾ.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನೆ ಕಾರ್ಯದರ್ಶಿ ಅಶ್ವತ್ಥ್, ನಿವೃತ್ತ ಮುಖ್ಯ ಶಿಕ್ಷಕ ಮುನಿಶಾಮಯ್ಯ, ಮುನಿರಾಮಯ್ಯ, ಮುಖ್ಯ ಶಿಕ್ಷಕಿ ಓಂಕಾರಮ್ಮ ಅಂಬೇಡ್ಕರ್ ವಿಚಾರಗಳ ಬಗ್ಗೆ ಮಾತನಾಡಿದರು.
ಶಾಲಾ ಮಕ್ಕಳಿಂದ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳ ನಡೆದವು. ಎಸ್‌ಡಿಎಂಸಿ ಸದಸ್ಯ ಶ್ರೀನಿವಾಸ ಸೇರಿದಂತೆ ಶಾಲಾ ಶಿಕ್ಷಕ ವರ್ಗದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement