ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಬೊಂಬೆನಗರಿಯ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ

Vishwanath S
Updated On : 16 Apr 2013, 12:36 pm

ಚನ್ನಪಟ್ಟಣ: ಬೊಂಬೆನಗರಿಯ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾಕುಮಾರಸ್ವಾಮಿ ಸೋಮುವಾರ ಅಖಾಡಕ್ಕಿಳಿದರು.
ಇದರೊಂದಿಗೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮೊದಲ ಮಹಿಳಾ ಅಭ್ಯರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಪತ್ನಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ನ ಹಲವಾರು ಮುಖಂಡರು ತಾಲೂಕಿನ ವಿವಿಧ ಗ್ರಾಮಗಳಿಂದ ಹರಿದು ಬಂದ ಜನಸಾಗರ  ಸಾಕ್ಷಿಯಾದರು.
ಬೃಹತ್ ಮೆರವಣಿಗೆ: ಮಂಗಳವಾರ ಪೇಟೆಯ ಬಸವೇಶ್ವರ ದೇವಾಲಯದಿಂದ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿದ ಅನಿತಾಕುಮಾರಸ್ವಾಮಿ ತಾಲೂಕು ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು, ಜಯಘೋಷ ಹಾಕುತ್ತಾ ಮೆರವಣಿಗೆಯಲ್ಲಿ ಸಾಗಿ ಅನಿತಾಕುಮಾರಸ್ವಾಮಿಗೆ ಬೆಂಬಲ ವ್ಯಕ್ತಪಡಿಸಿದರು.
ವಿವಿಧ ದೇವಾಲಯಗಳಿಗೆ ಭೇಟಿ: ನಾಮಪತ್ರ ಸಲ್ಲಿಕೆಗೆ ಮುನ್ನಾ ಪಟ್ಟಣದ ದರ್ಗಾ, ಮಳೂರು ದೇವಾಲಯ, ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಿಗೆ ಪೂಜೆ ಸಲ್ಲಿಸಿದರು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ತಾಲೂಕು ಕಚೇರಿವರೆಗೆ ಸಾಗಿ ನಾಮಪತ್ರ ಸಲ್ಲಿಸಿದರು. ಡೊಳ್ಳು, ಪೂಜೆ, ವೀರಗಾಸೆ ಕುಣಿತ ಮೆರವಣಿಗೆಗೆ ಮೆರಗು ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement