ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಲಿಂಬಾವಳಿ ನಾಮಪತ್ರ ಸಲ್ಲಿಕೆ

Vishwanath S
Updated On : 16 Apr 2013, 12:51 pm

ಕ.ಪ್ರ.ವಾರ್ತೆ ,  ಕೃಷ್ಣರಾಜಪುರ ,  ಏ.15
ಮಹದೇವಪುರ ಮೀಸಲು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಅರವಿಂದ ಲಿಂಬಾವಳಿ  ನಾಮಪತ್ರ ಸಲ್ಲಿಸಿದರು.
ಕೃಷ್ಣರಾಜಪುರದಲ್ಲಿರುವ ಬೆಂಗಳೂರು ಪೂರ್ವ ತಾಲೂಕು ತಹಸೀಲ್ದಾರ್ ಕಚೇರಿಗೆ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಅವರು ಚುನಾವಣಾ ಅಧಿಕಾರಿ ಶಿವಸ್ವಾಮಿಯವರಿಗೆ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2008 ರಲ್ಲಿ ಕ್ಷೇತ್ರದ ಜನತೆ ತಮ್ಮ ಮೇಲೆ ವಿಶ್ವಾಸವಿಟ್ಟು ಮತ ನೀಡಿ ಜಯಶೀಲರನ್ನಾಗಿ ಮಾಡಿದರು. ಅವರ ನಂಬಿಕೆ ಮತ್ತು ವಿಶ್ವಾಸವನ್ನು ಹುಸಿಗೊಳಿಸದೆ 5 ವರ್ಷಗಳಲ್ಲಿ ಸುಮಾರು 1300 ಕೋಟಿಗೂ ಅಧಿಕ ಅನುದಾನ ತಂದು ಅಭಿವೃದ್ಧಿ ಪಡಿಸಿರುವುದರಿಂದ ಕ್ಷೇತ್ರದ  ಜನತೆ ಮತ್ತೊಮ್ಮೆ ತಮ್ಮನ್ನು ಬೆಂಬಲಿಸುವ ವಿಶ್ವಾಸ ವ್ಯಕ್ತ ಪಡಿಸಿದರು. ಮುಂದಿನ ಅಧಿಕಾರವಧಿಯಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಭರವಸೆ ನೀಡಿದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಎ.ಸಿ.ಶ್ರೀನಿವಾಸ್ ಮತ್ತು ಪಕ್ಷೇತರ ಅಭ್ಯರ್ಥಿಗಳಾಗಿ ಮುನಿವೆಂಕಟಪ್ಪ, ಗಣೇಶ್, ಶಿವಕುಮಾರ್ ನಾಮಪತ್ರಗಳನ್ನು ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement