ದಾಖಲೆಗಳಿಲ್ಲದ 406 ಚಿನ್ನದ ಬಳೆ ವಶ
ರಾಮನಗರ: ಸೂಕ್ತ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ಸುಮಾರು 4 ಕೆಜಿ 494 ಗ್ರಾಂ ತೂಕದ 406 ಚಿನ್ನದ ಬಳೆಗಳನ್ನು ತಲಘಟ್ಟಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಂಗಳವಾರ ಬೆಳಗಿನ ಜಾವ 2 ಗಂಟೆ ವೇಳೆಯಲ್ಲಿ ಬೆಂಗಳೂರು-ಕನಕಪುರ ಮುಖ್ಯ ರಸ್ತೆಯ ವ್ಯಾಲೀ ಸ್ಕೂಲ್ ಕ್ರಾಸ್ ಬಳಿ ಸಾಗುತ್ತಿದ್ದ ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರನ್ನು ಪೊಲೀಸರು ಪರಿಶೀಲನೆ ನಡೆಸಿದ ವೇಳೆ 3 ಪ್ಲಾಸ್ಟಿಕ್ ಡಬ್ಬಿಗಳಲ್ಲಿ ಬಚ್ಚಿಟ್ಟಿದ್ದ ಈ ಚಿನ್ನಾಭರಣ ದೊರೆತಿದೆ.
ಕಾರಿನಲ್ಲಿದ್ದ ವ್ಯಕ್ತಿಗಳನ್ನು ವಿಚಾರಣೆ ನಡೆಸಿದಾಗ ಚಿನ್ನಾಭರಣ ಸಾಗಣೆ ಸಂಬಂಧ ಸೂಕ್ತ ದಾಖಲೆಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ. ಮಾರುತಿ ಸ್ವಿಫ್ಟ್ ಕಾರು ಹಾಗೂ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.