ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರದಲ್ಲಿ ನಾಲ್ವರ ನಾಮಪತ್ರ

Mainashree
Updated On : 17 Apr 2013, 12:39 pm

ಕ.ಪ್ರ. ವಾರ್ತೆ  ದೊಡ್ಡಬಳ್ಳಾಪುರ  ಏ.16
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ವಿವಿಧ ರಾಜಕೀಯ ಪಕ್ಷಗಳ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿಯಿಂದ ಹಾಲಿ ಶಾಸಕ, ಕೊಳೆಗೇರಿ ಅಭಿವೃದ್ಧಿ ಮಂಡಲಿ ಅಧ್ಯಕ್ಷ ಜೆ.ನರಸಿಂಹಸ್ವಾಮಿ, ಬಿಎಸ್ಪಿಯಿಂದ ಪುರುಷೋತ್ತಮ್, ಸಿಪಿಐ(ಎಂ)ನಿಂದ ಆರ್.ಚಂದ್ರತೇಜಸ್ವಿ, ಜೆಡಿಎಸ್‌ನಿಂದ ಸಿ.ಚನ್ನಿಗಪ್ಪ ನಾಮಪತ್ರ ಸಲ್ಲಿಸಿದ್ದಾರೆ.
ತಮ್ಮ ಬೆಂಬಲಿಗರೊಂದಿಗೆ ತಾಲೂಕು ಕಚೇರಿಗೆ ಬಂದ ಅಭ್ಯರ್ಥಿಗಳು ಚುನಾವಣಾಧಿಕಾರಿ ಡಾ.ಮಹೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈಗಾಗಲೇ ವಿವಿಧ ರಾಜಕೀಯ ಪಕ್ಷಗಳು ತಮ್ಮ ಅಧಿಕೃತ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಉಳಿದ ಅಭ್ಯರ್ಥಿಗಳು ಏ.17ರ ಬುಧವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ. ಕೆಜೆಪಿಯಿಂದ ಚಿತ್ರ ನಿರ್ದೇಶಕ ವಿ.ನಾಗೇಂದ್ರಪ್ರಸಾದ್, ಕಾಂಗ್ರೆಸ್‌ನಿಂದ ಟಿ.ವೆಂಕಟರಾಮಯ್ಯ(ಅಪ್ಪಕಾರನಹಳ್ಳಿ ವೆಂಕಟೇಶ್), ಬಂಡಾಯ ಜೆಡಿಎಸ್ ಅಭ್ಯರ್ಥಿಯಾಗಿ ಬಿ.ಮುನೇಗೌಡ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement