ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕೆ.ಮುನಿಯಪ್ಪ ಜೆಡಿಎಸ್ ಸೇರ್ಪಡೆ

Mainashree
Updated On : 19 Apr 2013, 12:54 pm

ದೊಡ್ಡಬಳ್ಳಾಪುರ: ತಾಲೂಕು ಪಂಚಾಯಿತಿ ಸದಸ್ಯ, ಭೋವಿ ಜನಾಂಗದ ಮುಖಂಡ ಓಬದೇನಹಳ್ಳಿ ಕೆ.ಮುನಿಯಪ್ಪ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇಲ್ಲಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜೆಡಿಎಸ್ ಪಕ್ಷದ ಜನಪರ ಆಡಳಿತ, ಕುಮಾರಸ್ವಾಮಿ ಮತ್ತು ದೇವೇಗೌಡರ ಅಭಿವೃದ್ಧಿಪರ ಆಡಳಿತವನ್ನು ಬೆಂಬಲಿಸಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ತಾಲೂಕಿನಲ್ಲಿ ಈ ಬಾರಿ ಜೆಡಿಎಸ್ ಅನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ ಎಂದರು. ತಾಲೂಕು ಜೆಡಿಎಸ್ ಅಧ್ಯಕ್ಷ ಆರ್.ಗೋವಿಂದರಾಜು, ಮುಖಂಡರಾದ ಅಪ್ಪಯ್ಯಣ್ಣ, ಎಸ್.ದಯಾನಂದ್, ಬಾಶೆಟ್ಟಿಹಳ್ಳಿ ನಾರಾಯಣಸ್ವಾಮಿ, ಪುಟ್ಟಬಸವರಾಜು, ಆರೀಫ್, ಜಾವೀದ್, ನಗರಸಭಾ ಸದಸ್ಯ ರವಿಕುಮಾರ್, ಶಿವಕುಮಾರ್, ರಾಜ್ಯ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಡೇವಿಡ್ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement