ವಿಶೇಷ ಪೂಜೆ
ದೇವನಹಳ್ಳಿ: ರಾಮನವಮಿ ಅಂಗವಾಗಿ ಇಲ್ಲಿನ ಬಹುತೇಕ ಎಲ್ಲ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಹಾಗೂ ಹಳೇ ಬಸ್ನಿಲ್ದಾಣದ ವಾಹನ ಮಾಲೀಕರ ಸಂಘ ಮತ್ತು ಹಳೇ ತಾಲೂಕು ಕಚೇರಿ ಬಳಿ ಇರುವ ಸೀತಾರಾಮ ಲಕ್ಷ್ಮಣ ಸಮೇತ ಆಂಜನೇಯ ಸ್ವಾಮಿ ದೇವಾಲಯ ಮತ್ತು ಕೋಟೆ ರಾಘವೇಂದ್ರಸ್ವಾಮಿಗಳ ದೇವಾಲಯದಲ್ಲಿರುವ ಸೀತಾರಾಮ ಸಮೇತ ವೀರಾಂಜನೇಯಸ್ವಾಮಿಗೆ ಶುಕ್ರವಾರ ವಿಶೇಷ ಪೂಜಾ ಕಾರ್ಯ ನಡೆದವು. ವೀರಾಂಜನೇಯಸ್ವಾಮಿಗೆ ಬೆಣ್ಣೆ ಅಲಂಕಾರ ಮಾಡಲಾಗಿತ್ತು. ಪಟ್ಟಣದ ಎಲ್ಲ ಅಶ್ವತ್ಥ ್ಥಕಟ್ಟೆಗಳಲ್ಲಿ ಶ್ರೀರಾಮರ ಭಾವಚಿತ್ರ ಇಟ್ಟು ಪೂಜೆ ಮಾಡಿ ನಂತರ ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.