ಆಕಸ್ಮಿಕ ವಿದ್ಯುತ್ ಸ್ಪರ್ಶ ವಿದ್ಯಾರ್ಥಿ ಸಾವು
ನೆಲಮಂಗಲ: ಪಟ್ಟಣದ ವೀವರ್ಸ್ ಕಾಲೋನಿಯಲ್ಲಿ ನೇಯ್ಗೆ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಪರಶುರಾಮ್(13) ಎಂಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶಾಲೆಗೆ ರಜೆ ಇದುದ್ದರಿಂದ ಪರಶುರಾಮ್ ತನ್ನ ಮನೆಯಲ್ಲಿ ನೇಯ್ಗೆ ಕೆಲಸ ಮಾಡುತ್ತಿದ್ದ ಪೋಷಕರಿಗೆ ಸಹಾಯ ಮಾಡುತ್ತಿದ್ದ. ಕೆಲಸಕ್ಕೆ ಮುಟ್ಟುಗೋಲು ಬೇಕಾದ್ದರಿಂದ ತರುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ಪಟ್ಟಣ ಠಾಣೆ ಪೊಲೀಸರು ತಿಳಿಸಿದ್ದಾರೆ.