ಮತಗಟ್ಟೆ ಅಧಿಕಾರಿಗಳ ತರಬೇತಿ ಸ್ಥಳ ಬದಲು
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಾರ್ಯಾಲಯ ನೇತೃತ್ವದಲ್ಲಿ ತಾಲೂಕಿನ ಮತಗಟ್ಟೆ ಅಧ್ಯಕ್ಷಾಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಏ.22ರ ಸೋಮವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಈ ಮೊದಲು ನೇಮಕಾತಿ ಆದೇಶದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ ನಡೆಯಲಿದೆ ಎಂದು ತಿಳಿಸಲಾಗಿತ್ತು. ಆದರೆ ಕಾರಣಾಂತರದಿಂದ ಸ್ಥಳ ಬದಲಾವಣೆ ಮಾಡಿದ್ದು, ನಿಗದಿತ ಸಮಯಕ್ಕೆ ಸೊಬಗು ಚಿತ್ರಮಂದಿರದಲ್ಲಿ ತರಬೇತಿ ಆರಂಭವಾಗಲಿದೆ. ಮಧ್ಯಾಹ್ನದ ನಂತರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ತರಬೇತಿ ಸಭೆ ವರ್ಗಾವಣೆಯಾಗಲಿದೆ. ಎಲ್ಲ ಮತಗಟ್ಟೆ ಅಧ್ಯಕ್ಷಾಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಬೆಳಗ್ಗೆ 10ಗಂಟೆಗೆ ಸೊಬಗು ಚಿತ್ರಮಂದಿರದಲ್ಲಿ ಹಾಜರಾಗಲು ಸೂಚಿಸಲಾಗಿದೆ ಎಂದು ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.