ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ತೋಟದ ಮನೆಯಲ್ಲಿದ್ದ ಅಕ್ರಮ ಮದ್ಯ ವಶ

Vishwanath S
Updated On : 24 Apr 2013, 11:45 am

ಶಿಡ್ಲಘಟ್ಟ: ತೋಟದ ಮನೆಯೊಂದರಲ್ಲಿ ಮತದಾರರಿಗೆ ಹಂಚಿಕೆ ಮಾಡಲು ಇಟ್ಟಿದ್ದ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಮಳ್ಳೂರು ಗ್ರಾಮದ ನಾರಾಯಣಸ್ವಾಮಿ ಎಂಬುವವರ ತೋಟದ ಮನೆಯಲ್ಲಿ ಅಕ್ರಮವಾಗಿ ಮದ್ಯವನ್ನು ಅಡಗಿಸಿ ಇಟ್ಟಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು, ಸುಮಾರು 40 ಸಾವಿರರು.  ಮೌಲ್ಯದ 18 ಕೇಸ್ ರಾಜಾ ವಿಸ್ಕಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಜತೆಗೆ ತೋಟದ ಮಾಲೀಕ ನಾರಾಯಣಸ್ವಾಮಿಯನ್ನು ಬಂಧಿಸಿರುವ ಅಬಕಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement