ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ತರಬೇತಿಗೆ ಗೈರಾದರೆ ಕ್ರಿಮಿನಲ್ ಮೊಕದ್ದಮೆ

Vishwanath S
Updated On : 26 Apr 2013, 12:02 pm

ಕ.ಪ್ರ.ವಾರ್ತೆ  ರಾಮನಗರ ಏ.24
ಮತಗಟ್ಟೆ ಅಧ್ಯಕ್ಷಾಧಿಕಾರಿ ಮತ್ತು ಸಹಾಯಕ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮಕ್ಕೆ  ಗೈರು ಹಾಜರಾದ ಅಧಿಕಾರಿಗಳ ವಿರುದ್ಧ  ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ.
ಜಿಲ್ಲೆಯ ಎಲ್ಲ 4 ಕ್ಷೇತ್ರಗಳಲ್ಲಿ ಏ.22 ಮತ್ತು 23ರಂದು ಮತಗಟ್ಟೆ ಅಧ್ಯಕ್ಷಾಧಿಕಾರಿ ಮತ್ತು ಸಹಾಯಕ ಅಧಿಕಾರಿಗಳಿಗೆ ತರಬೇತಿ ನಡೆಯಿತು. ನಿಯೋಜನೆಗೊಂಡವರ ಪೈಕಿ ಕೆಲವರು ಗೈರಾಗಿರುವ ಬಗ್ಗೆ ಮಾಹಿತಿ ಇದ್ದು, ಅಂತಹವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ನಿಯಮ 1951ರಡಿ ಮೊಕದ್ದಮೆ ದಾಖಲಾಗಲಿದೆ ಎಂದು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನವೀನ್‌ರಾಜ್ ಸಿಂಗ್ ತಿಳಿಸಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement